ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಕ್ರಿಕೆಟಿಗ ಶ್ರೀರಾಮ್ ನಿಧನ

Last Updated 16 ಫೆಬ್ರುವರಿ 2017, 19:17 IST
ಅಕ್ಷರ ಗಾತ್ರ
ಬೆಂಗಳೂರು: ಕರ್ನಾಟಕ ರಣಜಿ ತಂಡದ ಮಾಜಿ ಆಟಗಾರ ಕೆ. ಶ್ರೀರಾಮ್ (43) ಅವರು ಗುರುವಾರ ತೀವ್ರ ಹೃದಯಾಘಾತದಿಂದ ನಿಧನರಾದರು. 
 
ಬಲಗೈ ಬ್ಯಾಟ್ಸ್‌ಮನ್ ಮತ್ತು ಬೌಲರ್ ಆಗಿದ್ದ ಅವರು 1995 ರಿಂದ 1999ರ ಅವಧಿಯಲ್ಲಿ 15 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು.  ಒಟ್ಟು 644 ರನ್‌ಗಳನ್ನು ಗಳಿಸಿದ್ದರು.  ಅದರಲ್ಲಿ  ಒಂದು ಶತಕ ಮತ್ತು ಒಂದು ಅರ್ಧಶತಕ ಸೇರಿದೆ.
 
1996–97ರಲ್ಲಿ ಐದು ಲೀಸ್ಟ್‌ ‘ಎ’ ಪಂದ್ಯಗಳಲ್ಲಿ ಆಡಿದ್ದರು. ನಿವೃತ್ತಿಯ ನಂತರವೂ ಕ್ರಿಕೆಟ್‌ನೊಂದಿಗೆ ನಂಟು ಉಳಿಸಿಕೊಂಡಿದ್ದ ಅವರು ಜೂನಿ ಯರ್ ಆಟಗಾರರಿಗೆ ಮಾರ್ಗದರ್ಶಕರಾಗಿದ್ದರು. 
 
ಅವರ ಅಣ್ಣ ಕೆ. ಶ್ರೀನಾಥ್ ಅವರು ಕರ್ನಾಟಕ ಮತ್ತು ತಮಿಳುನಾಡು ರಾಜ್ಯ ತಂಡಗಳ ಪರ ಆಡಿದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT