ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಲಿಪಶುಗಳತ್ತ ಗಮನಹರಿಸಿ’

Last Updated 17 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ
ನವದೆಹಲಿ: ಮಾನವ ಹಕ್ಕುಗಳ ಉಲ್ಲಂಘನೆಗೆ ವಿಚಾರದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭಯೋತ್ಪಾದಕ ದಾಳಿಗೊಳಗಾದ ಬಲಿಪಶುಗಳತ್ತಲೂ ಗಮನಹರಿಸಬೇಕು ಎಂದು ಅಂತರಾಷ್ಟ್ರೀಯ ನ್ಯಾಯಾಲಯದ ಸದಸ್ಯ ದಲ್ವೀರ್‌ ಭಂಡಾರಿ ಹೇಳಿದ್ದಾರೆ. 
 
ಎನ್‌ಎಚ್‌ಆರ್‌ಸಿ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ (ಎಸ್‌ಎಚ್‌ಆರ್‌ಸಿ)ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ ಈ ನಿಟ್ಟಿನಲ್ಲಿ ಬಹಳಷ್ಟು ಕೆಲಸಗಳು ಆಗಬೇಕಾಗಿವೆ’ ಎಂದರು. 
 
‘ಎನ್‌ಎಚ್‌ಆರ್‌ಸಿ ಸಾಕಷ್ಟು ಕೆಲಸಗಳನ್ನು ಮಾಡಿದೆ. ಮಾಡಬೇಕಾದ ಕೆಲಸಗಳೂ ಸಾಕಷ್ಟಿವೆ. ಮಾನವ ಕಳ್ಳಸಾಗಾಣಿಕೆ ನಡೆಯುತ್ತಿದೆ, ಆನೇಕ ಜನರು ಈಗಲೂ ಮನೆ ಇಲ್ಲದೆ ರಸ್ತೆಯಲ್ಲೇ ಮಲಗುತ್ತಿದ್ದಾರೆ, ನೀರು ಮತ್ತು ವಾಯು ಮಾಲಿನ್ಯ ಹೆಚ್ಚಾಗುತ್ತಿದೆ ಇವುಗಳತ್ತ ಗಮನಹರಿಸಬೇಕು. ಭಯೋತ್ಪಾದನೆಯ ಬಲಿಪಶುಗಳ ಪ್ರಕರಣಗಳನ್ನೂ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಆಯೋಗ ಗುರುತಿಸಬೇಕು’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT