ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಷ್ಟ್ರೀಯ ಹಾಡಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ’ 

Last Updated 17 ಫೆಬ್ರುವರಿ 2017, 19:27 IST
ಅಕ್ಷರ ಗಾತ್ರ

ನವದೆಹಲಿ: ‘ವಂದೇ ಮಾತರಂ’ ಹಾಡನ್ನು ರಾಷ್ಟ್ರೀಯ ಹಾಡಾಗಿ ನುಡಿಸುವಂತೆ ನಿರ್ದೇಶನ ನೀಡಬೇಕು ಎಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.

ರಾಷ್ಟ್ರೀಯ ಹಾಡು ಎಂಬ ಕಲ್ಪನೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ನ್ಯಾಯಮೂರ್ತಿಗಳ  ನ್ಯಾಯಪೀಠವು ಹೇಳಿದೆ.

ರಾಷ್ಟ್ರೀಯ ಗೌರವಕ್ಕೆ ಧಕ್ಕೆ ತಡೆ ಕಾಯ್ದೆ ಮತ್ತು ಸಂವಿಧಾನದಲ್ಲಿ ಹೇಳಲಾಗಿರುವ ಮೂಲಭೂತ ಹಕ್ಕುಗಳಲ್ಲಿ ರಾಷ್ಟ್ರೀಯ ಹಾಡಿನ ಬಗ್ಗೆ ಪ್ರಸ್ತಾಪವಿಲ್ಲ. ಕಾಯ್ದೆಯ ಕಲಂ 51ಎ ಯಲ್ಲಿ ರಾಷ್ಟ್ರ ಗೀತೆ ಮತ್ತು ರಾಷ್ಟ್ರಧ್ವಜದ ಬಗ್ಗೆ ಸ್ಪಷ್ಟವಾಗಿ ಹೇಳಲಾಗಿದೆಯೇ ವಿನಾ ರಾಷ್ಟ್ರದ ಹಾಡಿನ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT