ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸಮತ ಗದ್ದಲ

Last Updated 18 ಫೆಬ್ರುವರಿ 2017, 9:00 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಹೊಸ ಸರ್ಕಾರ ವಿಶ್ವಾಸಮತ ಕೋರಲು ಶನಿವಾರ ಕರೆಯಲಾಗಿರುವ ವಿಶೇಷ ಅಧಿವೇಶನದಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ್ದಾರೆ.

ತಲೆ ಎಣಿಕೆ ಬದಲು ಗುಪ್ತ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷದ ಸದಸ್ಯರು ಆಗ್ರಹಿಸಿದರು. ಆದರೆ, ಇದಕ್ಕೆ ಸ್ಪೀಕರ್‌ ಒಪ್ಪಲಿಲ್ಲ. ಇದರಿಂದ ಕೆರಳಿದ ಡಿಎಂಕೆ ಸದಸ್ಯರು ಸ್ಪೀಕರ್‌ ಪೀಠದ ಎದುರಿನ ಟೇಬಲ್‌, ಕುರ್ಚಿ ಒಡೆದು ಮೈಕ್‌ಗಳನ್ನು ಮುರಿದುಹಾಕಿದ್ದಾರೆ.

ಗುಪ್ತ ಮತದಾನಕ್ಕೆ ಅವಕಾಶ ನೀಡದ ಸ್ಪೀಕರ್‌ ಧನಪಾಲ್‌ ಅವರ ವಿರುದ್ಧ ಘೋಷಣೆಗಳನ್ನು ಕೂಡಿದ ಡಿಎಂಕೆ ಸದಸ್ಯರು ಕಾಗದ ಪತ್ರ, ಫೈಲ್‌ಗಳನ್ನು ಹರಿದು ಸ್ಪೀಕರ್‌ ಪೀಠದತ್ತ ತೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT