ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪೇ ಕಿಸಾನ್ ಕಾರ್ಡ್ ಬಿಡುಗಡೆ

ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷ ಕೆ.ಎನ್.ರಾಜಣ್ಣ, ಜಿಲ್ಲಾಧಿಕಾರಿ ಅವರಿಂದ ಕಾರ್ಡ್‌ ಅನಾವರಣ
Last Updated 18 ಫೆಬ್ರುವರಿ 2017, 8:55 IST
ಅಕ್ಷರ ಗಾತ್ರ
ಮಡಿಕೇರಿ: ಕೊಡಗು ಜಿಲ್ಲಾ ಸಹಕಾರ ಸಂಘ ರಾಜ್ಯದಲ್ಲಿ ಅತ್ಯಂತ ಅಗ್ರಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷ ಕೆ.ಎನ್.ರಾಜಣ್ಣ ಶ್ಲಾಘಿಸಿದರು.
 
ನಗರದ ಕ್ರಿಸ್ಟಲ್‌ ಕೋರ್ಟ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ರೂಪೇ ಕಿಸಾನ್‌ ಕಾರ್ಡ್‌ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.
 
ಸಹಕಾರ ಸಂಘಗಳು ಹಲವು ಸಮಸ್ಯೆಗಳ ನಡುವೆಯೂ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿವೆ. ರಾಜ್ಯದಲ್ಲಿ 85 ಲಕ್ಷ ರೈತ ಕುಟುಂಬಗಳಿವೆ. ಹೆಚ್ಚಿನ ರೈತರು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದಾರೆ. ಚುನಾವಣೆ ಹತ್ತಿರ ಆಗತ್ತಿರುವ ಕಾರಣ ಸಾಲ ಮನ್ನಾ ಆಗುವ ಸಾಧ್ಯತೆಯಿದೆ ಎಂದು ಹೇಳಿದರು.
 
ಗರಿಷ್ಠ ಮುಖಬೆಲೆಯ ನೋಟು ರದ್ದತಿ ಪರಿಣಾಮ ಸಹಕಾರ ಸಂಘಗಳ ಮೇಲೂ ಆಗಿದೆ. ಇದರಿಂದ ಹೊರಬರಲು ಹಲವು ವರ್ಷಗಳು ಬೇಕಾಗಬಹುದು ಎಂದು ಹೇಳಿದರು.
 
ಮೈಕ್ರೋ ಎಟಿಎಂ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು, ಸಹಕಾರ ಕೇಂದ್ರ ಬ್ಯಾಂಕ್ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ರೈತನ ಬೆನ್ನೆಲುಬಾಗಿ ಸಹಕಾರಿ ಬ್ಯಾಂಕ್‌ಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿದರು. 
 
ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಎಸ್.ರಮಣರೆಡ್ಡಿ ಮಾತನಾಡಿದರು. ನಬಾರ್ಡ್ ವ್ಯವಸ್ಥಾಪಕ ಎಂ.ಸಿ ನಾಣಯ್ಯ, ಜಿಲ್ಲಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಬಿ.ಡಿ.ಮಂಜುನಾಥ್‌, ಜಿಲ್ಲಾ ಸಹಕಾರ ಬ್ಯಾಂಕ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿಜಯಕುಮಾರ್, ಬೋಜಮ್ಮ, ಬ್ಯಾಂಕ್‌ನ ಉಪಾಧ್ಯಕ್ಷ ಹರೀಶ್ ಪೂವಯ್ಯ, ಸುಮಿತ್ರಾ ಹಾಜರಿದ್ದರು.  
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT