ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಎಂಕೆ ಮುಖಂಡ ಸ್ಟಾಲಿನ್‌ ಬಂಧನ

Last Updated 18 ಫೆಬ್ರುವರಿ 2017, 13:20 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅನುಸರಿಸಿದ ಕ್ರಮ ನಿಯಮ ಬಾಹೀರವಾದುದು ಎಂದು ದೂರಿ ಸ್ಪೀಕರ್‌ ವಿರುದ್ಧ ಮರೀನಾ ಬೀಚ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆ ಮುಖಂಡ ಸ್ಟಾಲಿನ್‌ ಹಾಗೂ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ವಿಶ್ವಾಸ ಮತಯಾಚನೆಗೆ ಗುಪ್ತ ಮತದಾನಕ್ಕೆ ಅವಕಾಶ ನೀಡದ ಸ್ಪೀಕರ್‌ ಅವರ ಕ್ರಮವನ್ನು ಖಂಡಿಸಿ ಮರೀನ ಬೀಚ್‌ನಲ್ಲಿ ಡಿಎಂಕೆ ಮುಖಂಡರು, ಶಾಸಕರು ಹಾಗೂ ಕಾರ್ಯರ್ತರು ಪ್ರತಿಭಟನೆ ನಡೆಸಿದರು. ಸ್ಪೀಕರ್‌ ಅವರ ಕ್ರಮವನ್ನು ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹೇಳಿ, ಘೋಷಣೆ ಕೂಗಿದರು.

ಈ ವೇಳೆ ಪೊಲೀಸರು ಪಕ್ಷದ ಮುಖಂಡ ಸ್ಟಾಲಿನ್ ಅವರನ್ನು ಬಂಧಿಸಿದರು. ಸ್ಟಾಲಿನ್‌ ಅವರ ಬಂಧನಕ್ಕೆ ಪೊಲೀಸರು ಮುಂದಾಗುತ್ತಿದ್ದಂತೆ ಕಾರ್ಯರ್ತರು ಪೊಲೀಸರಿಗೆ ಅಡ್ಡಿಪಡಿಸಿದ್ದಾರೆ. ಬಂಧನಕ್ಕೆ ಅಡ್ಡಿಪಡಿಸಿದ ಕಾರ್ಯಕರ್ತರನ್ನೂ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT