ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಯೋಜೆನಿಕ್ ಎಂಜಿನ್ ಪರೀಕ್ಷೆ ಪೂರ್ಣ

Last Updated 18 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ತಿರುನೆಲ್ವೇಲಿ : ಸಂಪೂರ್ಣ ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಕ್ರಯೋಜೆನಿಕ್ ಎಂಜಿನ್‌ನ ಕೊನೆಯ ಹಂತದ ಪರೀಕ್ಷೆಯನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಶುಕ್ರವಾರ ಯಶಸ್ವಿಯಾಗಿ ನಡೆಸಿದೆ.

ಇಲ್ಲಿನ ಮಹೇಂದ್ರಗಿರಿಯಲ್ಲಿರುವ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಎಂಜಿನ್‌ನ ಪರೀಕ್ಷೆ ನಡೆಸಲಾಗಿದೆ. ಏಪ್ರಿಲ್‌ನಲ್ಲಿ ಈ ಎಂಜಿನ್‌ ಅನ್ನು ರಾಕೆಟ್‌ಗೆ ಅಳವಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಎಂಜಿನ್‌ ಅನ್ನು ಭೂಸ್ಥಿರ ಉಪಗ್ರಹ ಉಡಾವಣಾ ವಾಹನ –‘ಜಿಎಸ್‌ಎಲ್‌ವಿ –ಎಂಕೆ 3’ಗೆ ಅಳವಡಿಸಲಾಗುತ್ತದೆ. ಈ ರಾಕೆಟ್‌ 50 ಮೀಟರ್‌ ಎತ್ತರವಿದ್ದು, 415 ಟನ್ ತೂಕವಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ರಾಕೆಟ್‌ ಎಂಜಿನ್‌ಗಳಲ್ಲೇ ಕ್ರಯೋಜೆನಿಕ್‌ ಎಂಜಿನ್‌ ಅತ್ಯಂತ ಸಂಕೀರ್ಣವಾದ ತಂತ್ರಜ್ಞಾನ. ಸದ್ಯ ರಷ್ಯಾ, ಅಮೆರಿಕ, ಫ್ರಾನ್ಸ್, ಚೀನಾ,  ಜಪಾನ್‌ ಮತ್ತು ಭಾರತದ ಬಳಿ ಮಾತ್ರ ಈ ತಂತ್ರಜ್ಞಾನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT