ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿಯ ಕೆನ್ನಾಲಗೆಗೆ ವನಪಾಲಕ ಬಲಿ

Last Updated 18 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ
ಎಚ್.ಡಿ.ಕೋಟೆ: ತಾಲ್ಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಮೊಳೆಯೂರು ಅರಣ್ಯದಲ್ಲಿ ಶನಿವಾರ ಮಧ್ಯಾಹ್ನ ಕಾಳ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ವನಪಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
 
ವನಪಾಲಕ ಮುರುಗಪ್ಪ ತಮ್ಮಂಗಲು (32) ಮೃತಪಟ್ಟವರು. ಗಾಯಗೊಂಡಿರುವ ವಲಯ ಅರಣ್ಯಾಧಿಕಾರಿ ಗಂಗಾಧರ್, ಸಿಬ್ಬಂದಿ ಮಂಜು, ಮನು ಅವರನ್ನು ಸರಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರುಗಪ್ಪ ಅವರು ವಿಜಯಪುರ ಜಿಲ್ಲೆಯ ಸಿಂದಗಿ ಊರಿನವರು.
 
 ದಟ್ಟ ಹೊಗೆ ಮತ್ತು ಬೆಂಕಿಯ ರಭಸಕ್ಕೆ ಸಿಲುಕಿದ ಮರುಗಪ್ಪ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT