ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತನ ವಿರುದ್ಧ ಕಮಿಷನರ್‌ಗೆ ದೂರು

Last Updated 18 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಿರ್ದೇಶಕಿ ಸುಮನಾ ಕಿತ್ತೂರು ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿ ಬರಹ ಪ್ರಕಟಿಸಿದ ಆರೋಪದ ಮೇಲೆ ಪತ್ರಕರ್ತ ಗಣೇಶ್ ಕಾಸರಗೋಡು ಅವರ ವಿರುದ್ಧ ನಗರ ಪೊಲೀಸ್ ಕಮಿಷನರ್‌ ಪ್ರವೀಣ್ ಸೂದ್ ಅವರಿಗೆ ದೂರು ನೀಡಲಾಗಿದೆ.

‘ನಿನಗೆಷ್ಟು ಅಪ್ಪಂದಿರು’ ಎನ್ನುವುದೂ ಸೇರಿದಂತೆ ಗಣೇಶ್ ಅವರು ಅಕ್ಕನ ಬಗ್ಗೆ ಅತ್ಯಂತ ಕೆಟ್ಟ ಪದಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಕುಟುಂಬಕ್ಕೆ ತೀವ್ರ ಆಘಾತವಾಗುವಂತೆ ಮಾಡಿರುವ ಗಣೇಶ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಸುಮನಾ ಸೋದರಿ ಮೈತ್ರಿ ಅವರು ಕಮಿಷನರ್‌ಗೆ ದೂರು ಕೊಟ್ಟಿದ್ದಾರೆ.

ನಂತರ ಸುದ್ದಿಗಾರರ ಜತೆ ಮಾತನಾಡಿದ ಮೈತ್ರಿ, ‘ನನ್ನ ಅಕ್ಕ ಸುಮನಾ, ಸಿನಿಮಾ ಹಾಗೂ ಬರಹಗಳ ಮೂಲಕ ಖ್ಯಾತಿ ಹೊಂದಿದ್ದಾಳೆ. ಆಕೆಯ ನಿರ್ದೇಶನದ ಚಿತ್ರಗಳು ಅಂತರರಾಷ್ಟ್ರೀಯ ಸಿನಿಮೋತ್ಸವಗಳಲ್ಲೂ ಪ್ರದರ್ಶನ ಕಂಡು ಜನಮನ್ನಣೆ ಪಡೆದಿವೆ. ಆದರೆ, ಗಣೇಶ್ ಕೀಳು ಮನಸ್ಥಿತಿಯವರಂತೆ ಅವಹೇಳನ ಮಾಡಿದ್ದಾರೆ’ ಎಂದು ಆರೋಪಿಸಿದರು.

‘ನಿನಗೆ ಎಷ್ಟು ಜನ ಅಪ್ಪಂದಿರು ಎಂದು ಕೇಳುವುದು ನಾಗರಿಕ ಭಾಷೆಯಲ್ಲ. ಪತ್ರಕರ್ತರಾದ ಗಣೇಶ್ ಅವರಿಗೆ ಪದಬಳಕೆಯ ಜ್ಞಾನವಿರಬೇಕು. ಅವರ ವಿರುದ್ಧ ದೂರು ಸಲ್ಲಿಸಲಾಗಿದ್ದು, ಈ ಬಗ್ಗೆ ಸೋಮವಾರ ವಿಚಾರಣೆ ನಡೆಸುವುದಾಗಿ ಕಮಿಷನರ್ ಹೇಳಿದ್ದಾರೆ. ಮಹಿಳಾ ಆಯೋಗದಲ್ಲೂ ಪ್ರತ್ಯೇಕ ದೂರು ಸಲ್ಲಿಸಿದ್ದೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT