ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ನಟಿ ಮೇಲೆ ಲೈಂಗಿಕ ದೌರ್ಜನ್ಯ: ಮತ್ತಿಬ್ಬರ ಬಂಧನ

Last Updated 19 ಫೆಬ್ರುವರಿ 2017, 10:30 IST
ಅಕ್ಷರ ಗಾತ್ರ

ತಿರುವನಂತಪುರ: ಕನ್ನಡ ಚಿತ್ರಗಳಲ್ಲಿ ನಟಿಸಿದ್ದ ಕೇರಳದ ಬಹುಭಾಷಾ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಈ ಪ್ರಕರಣದ ಮಾಸ್ಟರ್ ಮೈಂಡ್ ಪಲ್ಸರ್ ಸುನೀಲ ಮತ್ತವನ ಸಹಚರನನ್ನು ಪೊಲೀಸರು ಕೊಯಮತ್ತೂರಿನಲ್ಲಿ  ಬಂಧಿಸಿದ್ದಾರೆ.

ಈಗಾಗಲೇ ಕಾರು ಚಾಲಕ ಮಾರ್ಟಿನ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶುಕ್ರವಾರ ತ್ರಿಶೂರ್‌ನಲ್ಲಿ ಚಿತ್ರೀಕರಣ ಮುಗಿಸಿ ಕೊಚ್ಚಿಗೆ ವಾಪಸ್‌ ಆಗುವಾಗ ಘಟನೆ ನಡೆದಿದೆ. ಚಿತ್ರ ತಂಡದವರೇ ಕೃತ್ಯ ಎಸಗಿದ್ದಾರೆ’ ಎಂದು ಆ ನಟಿ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT