ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎತ್ತಿನಹೊಳೆ:ಬಯಲುಸೀಮೆಗೆ ಶೀಘ್ರ ನೀರು

Last Updated 21 ಫೆಬ್ರುವರಿ 2017, 6:11 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಎತ್ತಿನಹೊಳೆ ಯೋಜನೆಗೆ ಸಾಕಷ್ಟು ಅಡ್ಡಿಗಳು ಎದುರಾಗಿರುವುದು ಸಾಮಾನ್ಯ. ಇರುವ ಅಡ್ಡಿ ಆತಂಕಗಳನ್ನು ಒಂದೊಂದೆ ನಿವಾರಣೆಯಾಗುತ್ತಿವೆ. ಶೀಘ್ರದಲ್ಲಿ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸುತ್ತೇವೆ’ ಸಂಸತ್‌ ಸದಸ್ಯ ಎಂ.ವೀರಪ್ಪ ಮೊಯಿಲಿ  ಹೇಳಿದರು.

ಅವರು ನಗರಸಭಾ ಆವರಣದಲ್ಲಿ 2015–16 ಮತ್ತು 2016–17ನೇ ಸಾಲಿನ ವಿವಿಧ ಅನುದಾನಗಳಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಮತ್ತು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ  ವಿವಿಧ ಸವಲತು ವಿತರಣಾ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ನಗರಕ್ಕೆ ನೀರಿನ ಅಭಾವ ಇರುವ ಹಿನ್ನೆಲೆ ಜಕ್ಕಲುಮಡುಗು ಜಲಾಶಯದಿಂದ ಶೇ 10ರಷ್ಟು ನೀರನ್ನು ಹೆಚ್ಚುವರಿಯಾಗಿ ನೀಡಿ, ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಯಂತ್ರಗಳ ಜೊತೆಗೆ ಮತ್ತೆರಡು ಡಯಾಲಿಸಿಸ್ ಯಂತ್ರಗಳಿಗೆ ಅನುದಾನದ ನೀಡುವಂತೆ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷ ಕೆ.ಬಿ.ಮುದ್ದಪ್ಪ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಶ್ರೀವತ್ಸ, ನಗರಸಭೆ ಉಪಾಧ್ಯಕ್ಷೆ ಜಯಲಕ್ಷ್ಮಿ ನಟರಾಜ್,ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಮಲ್ಲೇಶ್ ಹಾಗೂ ಸದಸ್ಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT