ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ವಿತರಣೆ

Last Updated 21 ಫೆಬ್ರುವರಿ 2017, 6:15 IST
ಅಕ್ಷರ ಗಾತ್ರ

ಆನೇಕಲ್‌:  ಅಸ್ಪೃಶ್ಯರು ಹಾಗೂ ಹಿಂದುಳಿದ ವರ್ಗಗಳ ಬಡವರಿಗೆ ಶಿಕ್ಷಣ ನೀಡಲು ಶ್ರಮಿಸಿದ ಮಹಾನ್ ನಾಯಕ ಮಹಾತ್ಮ ಜ್ಯೋತಿಬಾ ಪುಲೆ, ಅವರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಂಡು ಸಮಾಜದ ಕಟ್ಟ ಕಡೆಯ ಪ್ರಜೆಗೂ ಶಿಕ್ಷಣ ನೀಡಲು ಶ್ರಮಿಸಬೇಕಾಗಿದೆ ಎಂದು ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಿಳಿಸಿದರು.

ಅವರು ತಾಲ್ಲೂಕಿನ ಸಬ್‌ಮಂಗಲ ಗೇಟ್‌ನ ರಂಗ ಮಂದಿರದಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ವತಿಯಿಂದ ಆಯೋಜಿಸಿದ್ದ ಮಹಾತ್ಮ ಜ್ಯೋತಿಬಾಪುಲೆ 190ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂಘಟನೆಯ ತಾಲ್ಲೂಕು ಉಪಾಧ್ಯಕ್ಷ ಚನ್ನೇನಅಗ್ರಹಾರ ವೆಂಕಟೇಶ್, ಸಮಂದೂರು ಗ್ರಾಮ ಪಂಚಾಯಿತಿ ಸದಸ್ಯ ದೊಡ್ಡಯ್ಯ ಇದ್ದರು.
ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು. ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವಪ್ಪ, ಕಾವೇರಿ, ಸುನಿತಾ, ಚಂದ್ರಿಕಾ, ರಮ್ಯ, ಸುರೇಶ್ ಅವರನ್ನು ಸನ್ಮಾನಿಸಲಾಯಿತು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಬಿ.ಐ.ಸೋಮಶೇಖರ್‌ರೆಡ್ಡಿ, ಸದಸ್ಯ ಡಿ.ಮುನಿಯಲ್ಲಪ್ಪ, ಸಂಘಟನೆಯ ವಿಭಾಗೀಯ ಅಧ್ಯಕ್ಷ ಇಂಡ್ಲವಾಡಿ ಬಸವರಾಜು, ನಗರ ಜಿಲ್ಲಾಧ್ಯಕ್ಷ ಯಡವನಹಳ್ಳಿ ಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ಯಲ್ಲಪ್ಪ, ಸಂಘಟನೆಯ ಪದಾಧಿಕಾರಿ ಕಾರಿಗಳಾದ ಕೊಪ್ಪ ರವಿ, ಮುನಿಸ್ವಾಮಿ, ಡಾ.ಕೆ.ಎಸ್.ಸ್ವಾಮಿ, ಎ.ಲವ, ಆರ್.ವೆಂಕಟೇಶ್ ಕೊಪ್ಪ ರಾಮಾಂಜಿ, ರಾಮಸಾಗರ ರಾಜು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT