ನವದೆಹಲಿ: ಹೃದಯ ಸಂಬಂಧಿ ಚಿಕಿತ್ಸೆಗೆ ಬಳಸುವ ಸ್ಟೆಂಟ್‌ಗಳು ಮಾರುಕಟ್ಟೆಯಲ್ಲಿ ದೊರೆಯುತ್ತಿಲ್ಲ ಎಂಬ ವರದಿಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸ್ಟೆಂಟ್‌ಗಳನ್ನು ತಯಾರಿಸುವ ಕಂಪೆನಿಗಳಿಗೆ ಸರ್ಕಾರ ಸೂಚನೆ ನೀಡಿದ್ದು, ‘ಕಡ್ಡಾಯವಾಗಿ ತಯಾರಿಕೆ ಮುಂದುವರಿಸಬೇಕು ಮತ್ತು ಆಸ್ಪತ್ರೆಗಳಿಗೆ ಪೂರೈಸಬೇಕು’ ಎಂದು ಹೇಳಿದೆ.