ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾ ಲಿಗಾ ಫುಟ್‌ಬಾಲ್‌: ಅಗ್ರಸ್ಥಾನಕ್ಕೇರಿದ ಮ್ಯಾಡ್ರಿಡ್‌

Last Updated 27 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ಮ್ಯಾಡ್ರಿಡ್‌ (ಎಎಫ್‌ಪಿ): ನಾಯಕ ಕ್ರಿಸ್ಟಿಯಾನೊ ರೊನಾಲ್ಡೊ  ಮತ್ತು ಗರೆತ್‌ ಬಾಲೆ ತಂದಿತ್ತ ತಲಾ ಒಂದು ಗೋಲುಗಳ ಬಲದಿಂದ ರಿಯಲ್‌ ಮ್ಯಾಡ್ರಿಡ್‌ ತಂಡ ಲಾ ಲಿಗಾ ಫುಟ್‌ಬಾಲ್‌ ಟೂರ್ನಿಯ ಪಂದ್ಯದಲ್ಲಿ ಗೆದ್ದು ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಮ್ಯಾಡ್ರಿಡ್‌ 3–2 ಗೋಲುಗಳಿಂದ ವಿಲ್ಲಾರಿಯಲ್‌ ತಂಡವನ್ನು ಹಣಿಯಿತು. ಆರಂಭದಲ್ಲಿ ಪರಿಣಾಮಕಾರಿ ಆಟ ಆಡಲು ವಿಫಲವಾಗಿದ್ದ ರಿಯಲ್‌ ಮ್ಯಾಡ್ರಿಡ್‌ ತಂಡ 0–2ರಿಂದ ಹಿಂದಿತ್ತು. ಆ ಬಳಿಕ ತಂಡ ಮಿಂಚಿನ ಆಟ ಆಡಿ ಗೆಲುವು ಒಲಿಸಿಕೊಂಡಿತು.

ಇನ್ನೊಂದು ಪಂದ್ಯದಲ್ಲಿ ಬಾರ್ಸಿ ಲೋನಾ ತಂಡ 2–1 ಗೋಲುಗಳಿಂದ ಅಟ್ಲೆಟಿಕೊ ಮ್ಯಾಡ್ರಿಡ್‌ ತಂಡದ ವಿರುದ್ಧ ಗೆದ್ದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT