ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿ ಆಕರ್ಷಣೆ ತಾಣ 3ನೆ ಸ್ಥಾನದಲ್ಲಿ ಕರ್ನಾಟಕ

‘ಅಸೋಚಾಂ’ ಅಧ್ಯಯನ ವರದಿ
Last Updated 27 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರವಾಸಿಗರಿಗೆ ಉತ್ತಮ ಮೂಲ ಸೌಕರ್ಯಗಳನ್ನು ಒದಗಿಸಿದರೆ 2019ರ ಷ್ಟೊತ್ತಿಗೆ ಕರ್ನಾಟಕವು 15 ಕೋಟಿ ದೇಶಿಯ ಹಾಗೂ 10 ಲಕ್ಷ ವಿದೇಶಿ ಪ್ರವಾಸಿಗರನ್ನು ಆಕರ್ಷಿಸಲಿದೆ ಎಂದು ಭಾರತೀಯ ವಾಣಿಜ್ಯೋದ್ಯಮ ಮಹಾಸಂಘ (ಅಸೋಚಾಂ) ನಡೆಸಿದ ಅಧ್ಯಯನದಲ್ಲಿ ತಿಳಿಸಲಾಗಿದೆ.
ಹೋಟೆಲ್‌ ಉದ್ಯಮದಲ್ಲಿ ಬಂಡವಾಳ ಆಕರ್ಷಿಸುವುದರಲ್ಲಿ ಕರ್ನಾಟಕ ರಾಜ್ಯವು ಮೂರನೆಯ ಸ್ಥಾನದಲ್ಲಿದೆ.

ದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿರುವುದರಿಂದ ಇಲ್ಲಿನ ಪ್ರವಾಸೋದ್ಯಮವು  ಶೇ 6 ರಷ್ಟು ಬೆಳವಣಿಗೆ ಕಾಣಲಿದೆ. 
ವಿದೇಶಿ ಪ್ರವಾಸಿಗರ ಭೇಟಿಯು ವರ್ಷದಿಂದ ವರ್ಷಕ್ಕೆ ಶೇ 13ರಷ್ಟು ಏರಿಕೆ ಕಾಣುತ್ತಿದೆ. 2015ರಲ್ಲಿ ಆರು ಲಕ್ಷ ವಿದೇಶಿ ಪ್ರವಾಸಿಗರು ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ರಾಜ್ಯ ಸರ್ಕಾರವು  ಪ್ರಮುಖ ಪ್ರವಾಸಿ ತಾಣಗಳಿಗೆ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ವ್ಯವಸ್ಥಿತ ಪ್ರವಾಸಿ ಕಾರ್ಯಕ್ರಮ  ಏರ್ಪಡಿಸಿದರೆ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರ ಇನ್ನಷ್ಟು ಹೆಚ್ಚಲಿದೆ ಎಂದು ‘ಅಸೋಚಾಂ’ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಿವಕುಮಾರ್‌ ಹೇಳಿದ್ದಾರೆ.

ದೇಶದಲ್ಲಿ 2016ರ  ಜೂನ್‌ ಹೊತ್ತಿಗೆ ಹೋಟೆಲ್‌ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಒಟ್ಟು  ₹93,400 ಕೋಟಿ ಬಂಡವಾಳ ಹೂಡಿಕೆ ಮಾಡಲಾಗಿತ್ತು. ಅದರಲ್ಲಿ ಕರ್ನಾಟಕವು ₹11,000 ಕೋಟಿ   ಆಕರ್ಷಿಸಿದೆ.

ದೇಶಿ ಪ್ರವಾಸಿಗರನ್ನು (ಶೇ 23) ಆಕರ್ಷಿಸುವಲ್ಲಿ ತಮಿಳುನಾಡು ಮೊದಲ ಸ್ಥಾನದಲ್ಲಿ ಇದೆ. ನಂತರದ ಸ್ಥಾನಗಳಲ್ಲಿ ಉತ್ತರ ಪ್ರದೇಶ (ಶೇ14), ಆಂಧ್ರಪ್ರದೇಶ (ಶೇ8.5)  ಮತ್ತು ಕರ್ನಾಟಕ (ಶೇ 8.4) ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT