ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಹಾಜರಿಗೆ ಆಕ್ಷೇಪ: ಬಿಬಿಎಂಪಿ ಆಯುಕ್ತರಿಗೆ ನೋಟಿಸ್ ಜಾರಿಗೆ ಆದೇಶ

Last Updated 27 ಫೆಬ್ರುವರಿ 2017, 20:50 IST
ಅಕ್ಷರ ಗಾತ್ರ
ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 38ನೇ ವಾರ್ಡ್‌ನ ಸದಸ್ಯೆ ಆಶಾ ಸುರೇಶ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಪಾಲಿಕೆಯ ಅಧಿಕೃತ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಆಕ್ಷೇಪಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
 
ಈ ಸಂಬಂಧ ಯಶವಂತಪುರ ನಿವಾಸಿ ಎನ್‌.ನಂಜುಂಡಪ್ಪ ಎಂಬು ವವರು ಸಲ್ಲಿಸಿದ್ದ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್‌.ಬಿ.ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಬಿಬಿಎಂಪಿ ಆಯುಕ್ತರು ಹಾಗೂ ಇತರರಿಗೆ ನೋಟಿಸ್‌ ಜಾರಿ ಮಾಡಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT