ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಗತ್ತಿಗೆ ವಚನ ಸಾಹಿತ್ಯ ಸಾರಲು ಸಲಹೆ

Last Updated 28 ಫೆಬ್ರುವರಿ 2017, 10:39 IST
ಅಕ್ಷರ ಗಾತ್ರ

ಮೈಸೂರು: ಲಿಂಗಗಳ ಕುರಿತು ಪಾಶ್ಚಾತ್ಯ ವಿಜ್ಞಾನಿಗಳು ಸಂಶೋಧನೆಗಳನ್ನು ನಡೆಸುತ್ತಿದ್ದಾರೆ ಎಂದು ಹಿರಿಯ ವಕೀಲ ಎಚ್‌.ಗಂಗಾಧರನ್‌ ಹೇಳಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಜೆಎಸ್ಎಸ್‌ ಆಸ್ಪತ್ರೆ ಆವರಣದ ರಾಜೇಂದ್ರ ಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಶಕುಂತಲಾ ಜಯದೇವ ಶರಣ ಪ್ರಶಸ್ತಿ ಪ್ರದಾನ, ಶರಣ ಸಾಹಿತ್ಯ ಪರಿಷತ್ತಿನ ಗೌರವ ಸದಸ್ಯತ್ವ ಪ್ರದಾನ  ಸಮಾರಂಭದಲ್ಲಿ ಮಾತನಾಡಿದರು.

ನಮ್ಮ ಸಂಸ್ಕೃತಿಯಲ್ಲಿ ಲಿಂಗಗಳಿಗೆ ವಿಶಿಷ್ಟ ಸ್ಥಾನ ಇದೆ. ಲಿಂಗಗಳಲ್ಲಿ ಅಣುಶಕ್ತಿ ಇದೆ ಎಂಬ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಶರಣರ ಪ್ರತಿಯೊಂದು ವಚನವೂ ವೈಜ್ಞಾನಿಕವಾದವು. ವಚನ ಸಂಪತ್ತು ಇಡೀ ವಿಶ್ವಕ್ಕೆ ಅನ್ವಯವಾಗುತ್ತದೆ. ಇಂಥ ಅಗಾಧ ಸಾಂಸ್ಕೃತಿಕ ಸಂಪತ್ತಿನ ಕುರಿತು ಜಗತ್ತಿಗೆ ಸಾರುವ ಕೆಲಸವನ್ನು ಮಾಡಬೇಕಿದೆ ಎಂದು ಸಲಹೆ ನೀಡಿದರು.

ನಿವೃತ್ತ ಪ್ರಾಧ್ಯಾಪಕಿ ಶಾಂತಾ ಇಮ್ರಾಪೂರ ಮಾತನಾಡಿ, ಶರಣ ಸಾಹಿತ್ಯ ಪರಿಷತ್ತಿನ ಕೆಲಸಗಳು ಮನೆ ಮನೆಗಳಿಗೆ ತಲುಪುತ್ತಿವೆ. ದಾನದತ್ತಿಗಳು ಸಮಾಜದಲ್ಲಿ ನೈತಿಕ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿವೆ ಎಂದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರ ಗೊ.ರು.ಚನ್ನಬಸಪ್ಪ ಮಾತನಾಡಿ, ಪರಿಷತ್ತಿನ ವತಿಯಿಂದ ಕರ್ನಾಟಕದ ಶರಣ ಕ್ಷೇತ್ರಗಳ ದಾಖಲೆಗಳನ್ನು ಮಾಡಿದ್ದೇವೆ ಎಂದರು.

ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಶಾಂತಾ ಇಮ್ರಾಪುರ ಅವರಿಗೆ ಶಕುಂತಲ ಜಯದೇವ ಶರಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಿರಿಯ ವಕೀಲ ಎಚ್‌.ಗಂಗಾಧರನ್‌ ಅವರಿಗೆ ಪರಿಷತ್ತಿನ ಗೌರವ ಸದಸ್ಯತ್ವ ನೀಡಲಾಯಿತು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಗೌರವ ಸಲಹೆಗಾರ ಗೊ.ರು.ಚನ್ನಬಸಪ್ಪ ಮತ್ತು ಅಧ್ಯಕ್ಷ ಬಸವರಾಜ ಸಾದರ ಅವರನ್ನು ಅಭಿನಂದಿಸಲಾಯಿತು.

ಸಾಹಿತಿ ಮಲೆಯೂರು ಗುರುಸ್ವಾಮಿ ಅಭಿನಂದನಾ ನುಡಿಗಳನ್ನಾಡಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಜೆಪಿ ಮುಖಂಡ ತೋಂಟದಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT