ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನೀರು ಪೂರೈಕೆಗೆ ಆದ್ಯತೆ ನೀಡಿ’

ಉಡುಪಿ ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆ
Last Updated 2 ಮಾರ್ಚ್ 2017, 6:16 IST
ಅಕ್ಷರ ಗಾತ್ರ

ಉಡುಪಿ: ಕುಡಿಯುವ ನೀರಿನ ಪೂರೈ ಕೆಗೆ ಸಂಬಂಧಿಸಿದ ವಿಷಯದಲ್ಲಿ ಔಪಚಾ ರಿಕ ಪ್ರಕ್ರಿಯೆಗಳಿಗೆ ಮಹತ್ವ ನೀಡದೆ, ನೀರು ಪೂರೈಕೆಗೆ ಇಲಾಖೆಗಳು ಆದ್ಯತೆ ನೀಡಬೇಕು. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿ ಕೊಳ್ಳಬೇಕು ಎಂದು ಶಾಸಕ ವಿನಯ ಕುಮಾರ್ ಸೊರಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಡುಪಿ ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಬುಧವಾರ ಮಾತನಾಡಿದರು.

ಕುಡಿಯುವ ನೀರಿನ ಪೂರೈಕೆ ವಿಷಯದ ಚರ್ಚೆಯ ವೇಳೆ ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕ ನೀಡಿಲ್ಲ ಎಂದು ಗ್ರಾಮೀಣ ನೀರು ಸರಬರಾಜು ಇಲಾಖೆಯ ಅಧಿಕಾರಿ ಆರೋಪಿಸಿದರು, ಇದಕ್ಕೆ ಪ್ರತಿಕ್ರಿಸಿದ ಮೆಸ್ಕಾಂ ಸಿಬ್ಬಂದಿ ಅವರು ಅರ್ಜಿಯನ್ನೇ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನೊಂದು ಪ್ರಕರಣದಲ್ಲಿ ಮೋಟಾರ್ ಅನ್ನು ಈ ವರೆಗೆ ಅಳವಡಿಸಿಲ್ಲ ಆದ್ದರಿಂದ ವಿದ್ಯುತ್ ಸಂಪರ್ಕ ನೀಡಲಾಗಿಲ್ಲ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸೊರಕೆ, ಕುಡಿಯುವ ನೀರಿನ ಸರಬರಾಜಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯಗಳಲ್ಲಿಯೂ ನಿಯಮದ ನೆಪ ಹೇಳುವುದು ಸರಿಯಲ್ಲ. ಬಾಕಿ ಇರುವ ಕೆಲಸಗಳನ್ನು ಬೇಗ ಪೂರ್ಣಗೊಳಿಸಿ ಎಂದರು. ‘ನೀವೇ ಖುದ್ದಾಗಿ ಮೆಸ್ಕಾಂ ಕಚೇರಿಗೆ ಹೋಗಿ ಬಾಕಿ ಇರುವ ಕೆಲಸ ಮಾಡಿಸಿಕೊಂಡು ಬನ್ನಿ’ ಎಂದು ಗ್ರಾಮೀಣ ನೀರು ಸರಬರಾಜು ವಿಭಾ ಗದ ಅಧಿಕಾರಿಗೆ ತಾಕೀತು ಮಾಡಿದರು.

ಕನ್ನಡ ಮಾಧ್ಯಮ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಶಿಕ್ಷಕರು ಹಾಗೂ ಅಧಿಕಾರಿಗಳು ಕ್ರಮ ಕೈಗೊಳ್ಳ ಬೇಕು. ಈ ಕಾಲಕ್ಕೆ ಅನುಗುಣವಾಗಿ ಕೆಲವು ಬದಲಾವಣೆಗಳನ್ನು ಮಾಡಿಕೊ ಳ್ಳಬೇಕು. ಇಂಗ್ಲಿಷ್‌ ಅನ್ನು ಒಂದು ವಿಷಯವಾಗಿ ಕಲಿಸುತ್ತಿರುವ ಬಗ್ಗೆ ಹೆಚ್ಚಿನ ಪ್ರಚಾರ ನೀಡಿ ಎಂದು ಶಿಕ್ಷಣಾಧಿಕಾರಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿ ಯಿಸಿದ ಶಿಕ್ಷಣಾಧಿಕಾರಿ, ಪೋಷಕರು ಇಂಗ್ಲಿಷ್ ಮಾಧ್ಯಮದ ಕಡೆ ವಾಲಿರು ವುದರಿಂದ ಕನ್ನಡ ಶಾಲೆಗಳಿಗೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ನಾವು ಸಹ 1ನೇ ತರಗತಿಯಿಂದಲೇ ಒಂದು ವಿಷಯವಾಗಿ ಇಂಗ್ಲಿಷ್ ಕಲಿಸುತ್ತಿದ್ದೇವೆ. ವಿದ್ಯಾರ್ಥಿ ಗಳನ್ನು ಸೆಳೆಯಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ ಎಂದರು.

ನಿವೇಶನ ಹಂಚಿಕೆಗೆ ಸಂಬಂಧಿಸಿ ದಂತೆ ಕೆಲವು ಸಮಸ್ಯೆಗಳಿವೆ. ನಿವೇಶನಕ್ಕೆ ಗುರುತಿಸಿರುವ ಜಾಗ ಅರಣ್ಯ ಹಾಗೂ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿರುವುದು ಗೊತ್ತಾಗಿದೆ ಎಂದು ವಿಶೇಷ ತಹಶೀ ಲ್ದಾರ್‌ ಪ್ರದೀಪ್ ಹೇಳಿದರು. ಸಂಬಂಧಿ ಸಿದ ಇಲಾಖೆಯ ಅಧಿಕಾರಿಗಳು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಬಗ್ಗೆ ವಿಶೇಷ ಸಭೆ ನಡೆಸಿ ಅಲ್ಲಿಯೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ ಎಂದು ಸಲಹೆ ನೀಡಿದರು. ಕಾಪು ಪಟ್ಟಣದಲ್ಲಿ ಉದ್ಯಾನ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಿ. ಕಾಲು ಬಾಯಿ ರೋಗದ ಲಸಿಕೆಯನ್ನು ಸಮರ್ಪಕವಾಗಿ ಹಾಕಿ ಎಂದು ಸೊರಕೆ ಹೇಳಿದರು.

ಈಗಾಗಲೇ 68,800 ಗಿಡಗಳನ್ನು ನರ್ಸರಿಯಲ್ಲಿ ಬೆಳೆಸಿ ವಿತರಣೆಗೆ ಸಿದ್ಧಗೊಳಿಸಲಾಗಿದೆ. ಇದರಲ್ಲಿ 40 ಸಾವಿರ ಸಾಗುವಾನಿ ಹಾಗೂ ಉಳಿದವು ವಿವಿಧ ಜಾತಿಗೆ ಸೇರಿದ್ದಾಗಿವೆ. 8 ಸಾವಿರ ದೊಡ್ಡ ಗಿಡಗಳನ್ನು ಬೆಳೆಸಲಾಗಿದ್ದು ಅವುಗಳನ್ನು ನಗರ ವ್ಯಾಪ್ತಿಯಲ್ಲಿ ನೆಡಲಾ ಗುವುದು ಎಂದು ಅರಣ್ಯ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.

ಕಾಪುವಿನಲ್ಲಿ ಕೃಷಿ ಯಂತ್ರಗಳ ಬಾಡಿಗೆ ಕೇಂದ್ರ ಆರಂಭಿಸಲು ಈಗಾ ಗಲೇ ₹70 ಲಕ್ಷದ ಯಂತ್ರಗಳನ್ನು ಖರೀದಿಸಲಾಗಿದ್ದು, ಒಂದೆರಡು ಯಂತ್ರ ಗಳ ಖರೀದಿ ಮಾತ್ರ ಬಾಕಿ ಇದೆ. ಈ ಪ್ರಕ್ರಿಯೆ ಮುಗಿದ ನಂತರ ಯಂತ್ರ ಬಾಡಿಗೆ ಕೇಂದ್ರವನ್ನು ಆರಂಭಿಸಲಾ ಗುತ್ತದೆ. 1500 ಕ್ವಿಂಟಾಳ್ ಬಿತ್ತನೆ ಬೀಜಕ್ಕೆ ಈಗಾಗಲೇ ಪ್ರಸ್ತಾವನೆ ಕಳುಹಿಸ ಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ನಳಿನಿ ಪ್ರದೀಪ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಮೈರ್ಮಾಡಿ ಸುಧಾಕರ ಶೆಟ್ಟಿ, ವಿಲ್ಸನ್‌ ರೋಡ್ರಿಗಸ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶೇಷಪ್ಪ ಇದ್ದರು.

*
ಕೃಷಿ ಯಂತ್ರಧಾರೆ ಯೋಜನೆಯಡಿ ಕಾಪುವಿನಲ್ಲಿ ಯಂತ್ರ ಬಾಡಿಗೆ ಕೇಂದ್ರವನ್ನು ಶೀಘ್ರದಲ್ಲೇ ಆರಂಭಿಸಲು ಕ್ರಮ ಕೈಗೊಳ್ಳಿ.
-ವಿನಯ ಕುಮಾರ್ ಸೊರಕೆ,
ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT