ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುತಾತ್ಮ ಯೋಧರಿಗೆ ಸ್ಮರಣಾಂಜಲಿ

Last Updated 2 ಮಾರ್ಚ್ 2017, 19:42 IST
ಅಕ್ಷರ ಗಾತ್ರ
ಬೆಂಗಳೂರು: ಬೆಂಗಳೂರು ದೂರದರ್ಶನ ಕೇಂದ್ರ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲು ಮಾರ್ಚ್‌ 4 ರಂದು ‘ಸ್ಮರಣಾಂಜಲಿ’ ಕಾರ್ಯಕ್ರಮ ಆಯೋಜಿಸಿದೆ.
 
ದೂರದರ್ಶನದ ಹೆಚ್ಚುವರಿ ಮಹಾನಿರ್ದೇಶಕ(ದಕ್ಷಿಣ ವಲಯ) ಮಹೇಶ್‌ ಜೋಶಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮಾ. 4ರ ಸಂಜೆ 6 ಗಂಟೆಗೆ ರಾಜಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಯೋಧರಿಗೆ ನೃತ್ಯ ಮತ್ತು ಗೀತ ನಮನ ಸಲ್ಲಿಸಲಾಗುತ್ತಿದೆ. ಅಲ್ಲದೇ 2013 ರಿಂದ 2017ರವರೆಗೆ ದೇಶ ರಕ್ಷಣೆಯಲ್ಲಿ ಪ್ರಾಣತ್ಯಾಗ ಮಾಡಿದ ರಾಜ್ಯದ 15 ಯೋಧರ ಕುಟುಂಬ ಸದಸ್ಯರನ್ನು ಗೌರವಿಸಲಾಗುತ್ತಿದೆ’ ಎಂದರು.
 
ತತ್ವರಸಾನುಭವ: ‘ಮಾರ್ಚ್‌ 7 ರಂದು ಹಾವೇರಿ ಜಿಲ್ಲೆಯ ಶಿಶುವಿನಹಾಳದಲ್ಲಿ ‘ತತ್ವರಸಾನುಭವ’ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂತ ಶಿಶುನಾಳ ಶರೀಫ ಮತ್ತು ಗುರುಗೋವಿಂದ ಭಟ್ಟರ ಸ್ಮರಣೆಗಾಗಿ ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT