ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೈಕಸುಬುಗಳಿಂದ ಆರ್ಥಿಕ ಸಬಲತೆ

Last Updated 3 ಮಾರ್ಚ್ 2017, 6:45 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ಮಹಿಳೆಯರು ತಮ್ಮ ಬಿಡುವಿನ ವೇಳೆಯಲ್ಲಿ ಮನೆಯಲ್ಲೇ ಕುಳಿತು ಮಾಡಬಹುದಾದ ಕೈಕಸಬುಗಳ ಬಗ್ಗೆ ತರಬೇತಿ ಪಡೆದು ಸ್ವ ಉದ್ಯೋಗಿ ಗಳಾಗಿ ಆರ್ಥಿಕ ಸಬಲತೆ ಸಾಧಿಸಬೇಕು’ ಎಂದು ಶಾಸಕ ಎಸ್‌.ಜಯಣ್ಣ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕಿಯೋನಿಕ್ಸರ್‌ (ಮಂತ್ರಾಲಯ ಐಟಿ ಹಟ್ಸ್‌) ಕೊಳ್ಳೇಗಾಲ ಆಶ್ರಯದಲ್ಲಿ ಆಯೋ ಜಿಸಿದ್ದ ಮಹಿಳೆಯರ ಉಚಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರಿಗೆ ಮಂತ್ರಾಲಯ ಐಟಿ ಹಟ್ಸ್‌ ಸಂಸ್ಥೆ ವತಿಯಿಂದ 3 ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ಈ ತರಬೇತಿಯನ್ನು ಸದ್ಬಳಕೆ ಮಾಡಿಕೊಂಡು ತರಬೇತಿ ನಂತರ ಉದ್ಯೋಗ ಹೊಂದಿ ತಮ್ಮ ಆರ್ಥಿಕ ಮಟ್ಟ ಹೆಚ್ಚಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ಮಹಿಳಾ ಅಭಿವೃದ್ಧಿ ನಿರೀಕ್ಷಕರಾದ ಜಗದಾಂಬ ಸಿಡಿಪಿಒ ನಾಗೇಶ್‌, ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಡಾ. ದರ್ಶನ್‌, ಪರಮೇಶ್‌, ಪುಷ್ಪ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT