ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಜೊತೆ ಸಂಬಂಧ ವೃದ್ಧಿಗೆ ಟ್ರಂಪ್ ಆಡಳಿತ ಆಸಕ್ತಿ: ಜೈಶಂಕರ್‌

Last Updated 4 ಮಾರ್ಚ್ 2017, 19:57 IST
ಅಕ್ಷರ ಗಾತ್ರ

ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಣ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ಇಚ್ಛೆಯನ್ನು ಟ್ರಂಪ್‌ ಆಡಳಿತ ಹೊಂದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಹೇಳಿದರು.

ಟ್ರಂಪ್ ಆಡಳಿತದ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ರೆಕ್ಸ್‌ ಟಿಲ್ಲರ್‌ಸನ್‌ ಅವರ ಭಾರತ ಭೇಟಿಯ ದಿನಾಂಕ ಅಂತಿಮಗೊಳಿಸಲಾಗುತ್ತಿದೆ. ಅಲ್ಲದೆ, ಭಾರತ–ಅಮೆರಿಕ ನಡುವಣ ವಾಣಿಜ್ಯ ಸಂಬಂಧಿ ಮಾತುಕತೆಗಳಿಗೂ ದಿನಾಂಕ ನಿಗದಿ ಮಾಡಲಾಗುತ್ತಿದೆ ಎಂದು ಜೈಶಂಕರ್ ತಿಳಿಸಿದರು.

‘ಭಾರತದ ಜೊತೆಗಿನ ಸಂಬಂಧ ಉತ್ತಮಪಡಿಸುವ ವಿಚಾರದಲ್ಲಿ ಟ್ರಂಪ್‌ ಆಡಳಿತಕ್ಕೆ ಆಸಕ್ತಿ ಇದೆ ಎಂಬುದನ್ನು ನಾವು ಕಂಡುಕೊಂಡಿದ್ದೇವೆ’ ಎಂದು ಅವರು ಹೇಳಿದರು.

‘ಎರಡು ದೇಶಗಳ ನಡುವೆ ಸಂಬಂಧ ವೃದ್ಧಿಪಡಿಸುವ ವಿಚಾರದಲ್ಲಿ ಅಮೆರಿಕದ ಕಾಂಗ್ರೆಸ್ ಬೆಂಬಲವಾಗಿ ನಿಂತಿದೆ’ ಎಂದರು.

ಆಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಹಾಗೂ ಭಾರತ–ಅಮೆರಿಕ ದ್ವಿಪಕ್ಷೀಯ ಸಂಬಂಧದ ಕುರಿತು ಜೈಶಂಕರ್ ಅವರು ಟಿಲ್ಲರ್‌ಸನ್‌ ಜೊತೆ ಚರ್ಚಿಸಿದರು.

ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗಿರುವವರ ಕುರಿತು ಜೈಶಂಕರ್ ಅವರು ಆಂತರಿಕ ಭದ್ರತಾ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT