ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಶಿಸ್ತು, ಸಂಯಮ ಅವಶ್ಯಕ

ಭಾಗೀರಥಿ ಕಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ
Last Updated 6 ಮಾರ್ಚ್ 2017, 8:28 IST
ಅಕ್ಷರ ಗಾತ್ರ
ಕೊಪ್ಪಳ:  ವಿದ್ಯಾರ್ಥಿಗಳು ಶಿಸ್ತು, ಪ್ರಾಮಾಣಿಕತೆ, ಸಂಯಮವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ಎಸ್‌.ಯು.  ಪ್ರಕಾಶ್‌ಗೌಡ ಹೇಳಿದರು.
 
ತಾಲ್ಲೂಕಿನ ಹಿರೇಸಿಂಧೋಗಿ ಗ್ರಾಮದ ಭಾಗೀರಥಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
 
ಶಿಕ್ಷಣದಿಂದ ಮಕ್ಕಳು ಕ್ರಿಯಾಶೀಲರಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಿದಾಗ ಮಕ್ಕಳು ಉನ್ನತಸ್ಥಾನದಲ್ಲಿ ಬರಲು ಸಾಧ್ಯವಾಗುತ್ತದೆ ಎಂದರು. ರಮೇಶ ಹ್ಯಾಟಿ ಮಾತನಾಡಿ, ಶಾಲೆಯ ಏಳಿಗೆ ಶಿಕ್ಷಕರ ಮತ್ತು ಪಾಲಕರ ಸಹಕಾರ ಅವಶ್ಯಕ. 
 
ಶಿಕ್ಷಣ ನೀಡುವ ಮೂಲಕ ಶಿಕ್ಷಕರು ಸಮಾಜಕ್ಕೆ ಒಳ್ಳೆಯ ಪ್ರಜೆಗಳನ್ನು ನೀಡುತ್ತಾರೆ. ಪಾಲಕರು ಮಕ್ಕಳ ಬಾಹ್ಯ ಚಟುವಟಿಕೆ ಮತ್ತು ಮನೆಪಾಠ ಮಾಡಿಸುವುದನ್ನು ಗಮನಿಸಿದಾಗ ಮಾತ್ರ ಶಿಕ್ಷಕರ ಶ್ರಮ ಸಾರ್ತಕ ವಾಗುತ್ತದೆ ಎಂದರು. 
 
ಉದ್ಯಮಿ ಬಸವರಾಜ ಗಂಗಾವತಿ ಮಾತನಾಡಿ, ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡಿದಾಗ ಮಾತ್ರ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಕಂಡುಕೊಳ್ಳಲು ಸಾಧ್ಯ. ಮಕ್ಕಳಿಗೆ ಶಿಕ್ಷಣದ ಜತೆಗೆ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಸಹಕಾರಿ ಯಾಗುತ್ತವೆ ಎಂದರು.
 
ಬಳಿಕ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತಭಾಗ್ಯನಗರ ಪಟ್ಟಣ ಪಂಚಾಯಿತಿಯ ಸದಸ್ಯ ರಮೇಶ ಹ್ಯಾಟಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಇಂದಿರಾ ಬಾವಿಕಟ್ಟಿ, ಉದ್ಯಮಿ ಬಸವರಾಜ ಗಂಗಾವತಿ, ಹಿರಿಯ ಹೋರಾಟಗಾರ ಮಲ್ಲಪ್ಪ ಮಾದಿನೂರು, ಕಲಾವಿದರಾದ ಸುಭಾಷ್‌ ಕಲಾಲ್‌, ವಿಜಯ್‌ಕುಮಾರ ಹಣಿಗಿ, ಅಲ್ತಾಪ್‌ ಪಟೇಲ್‌ ಇದ್ದರು. ಶಾಲಾ ಮುಖ್ಯಶಿಕ್ಷಕ ಪರಶುರಾಮ ಕಲಾಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. 
 
ಶಿಕ್ಷಕಿ ರೇಖಾ ಬಡಿಗೇರ್‌ ಸ್ವಾಗತಿಸಿದರು. ಶಿಕ್ಷಕಿ ಲಕ್ಷ್ಮಿ ಗದ್ದಿ ನಿರೂಪಿಸಿದರು. ಶಿಕ್ಷಕಿ ಗೀತಾ ವಂದಿಸಿದರು.
 
* ಶಾಲೆಯ ಏಳಿಗೆ ಶಿಕ್ಷಕರ ಮತ್ತು ಪಾಲಕರ ಸಹಕಾರ ಅವಶ್ಯಕ. ಶಿಕ್ಷಕರು ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸುತ್ತಾರೆ. ಪಾಲಕರೂ ಮಕ್ಕಳನ್ನು ಗಮನಿಸಬೇಕಾಗುತ್ತದೆ.
-ರಮೇಶ ಹ್ಯಾಟಿ, ಸದಸ್ಯ, ಪಟ್ಟಣ ಪಂಚಾಯಿತಿ. ಭಾಗ್ಯನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT