ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ಮತ್ತು ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ
Last Updated 6 ಮಾರ್ಚ್ 2017, 9:22 IST
ಅಕ್ಷರ ಗಾತ್ರ
ಮೂಡುಬಿದಿರೆ:  ಅಡುಗೆ ಅನಿಲ ಮತ್ತು ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇದೇ 7ರಂದು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ.
 
 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆಯನ್ನು ಏಕಾಏಕಿ ₹ 86 ಹೆಚ್ಚಳ ಮಾಡಿದೆ. ಕೇವಲ ನಾಲ್ಕು ತಿಂಗಳಲ್ಲಿ ಸುಮಾರು ₹ 300 ಹೆಚ್ಚಳವಾಗಿದೆ.
 
ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಭಾರಿ ಇಳಿಕೆಯಾದರೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಲೆ ಇದೆ. ಇನ್ನೊಂದೆಡೆ ಬ್ಯಾಂಕ್‌ನಲ್ಲಿ ನಗದು ವ್ಯವಹಾರದ ಮೇಲೆ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದ್ದು ಇದು ನೋಟು ಅಮಾನ್ಯದಿಂದ ತೊಂದರೆಗೊಳಗಾದವರಿಗೆ ಬರೆ ಎಳೆದಂತಾಗಿದೆ. ಸರ್ಕಾರದ ಬೆಲೆ ಏರಿಕೆ ನೀತಿ ಜನಸಾಮಾನ್ಯರನ್ನು ದಿನದಿಂದ ದಿನಕ್ಕೆ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಮಂಗಳವಾರ ಬೆಳಿಗ್ಗೆ ಬ್ಲಾಕ್ ಕಾಂಗ್ರೆಸ್ ಕಚೇರಿ ಬಳಿಯಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ನಂತರ ಪ್ರತಿಭಟನೆ ಸಭೆ ನಡೆಸಲಾಗುವುದು. 

ಬಳಿಕ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.  ಮೂಡಾ ಅಧ್ಯಕ್ಷ ಸುರೇಶ್ ಪ್ರಭು ಕಾಂಗ್ರೆಸ್ ಮುಖಂಡರಾದ ರತ್ನಾಕರ ಸಿ. ಮೊಯಿಲಿ, ಚಂದ್ರಹಾಸ ಸನಿಲ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT