ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಾಧ್ಯಕ್ಷೆ 7ದಿನಗಳ ಧರಣಿ ಅಂತ್ಯ

ಪಿಡಿಒ ವರ್ಗಾವಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆ ಭರವಸೆ
Last Updated 7 ಮಾರ್ಚ್ 2017, 10:45 IST
ಅಕ್ಷರ ಗಾತ್ರ
ಚನ್ನಪಟ್ಟಣ: ಪಿಡಿಒ ಅನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ತಾಲ್ಲೂಕಿನ ಮಾಕಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವರಲಕ್ಷ್ಮಿ ಅವರು 7 ದಿನಗಳಿಂದ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿ ಸೋಮವಾರ ಅಧಿಕಾರಿಗಳ ಭರವಸೆಯ ಮೇರೆಗೆ ಅಂತ್ಯಗೊಂಡಿತು.
 
ಪಿಡಿಒ ವರ್ಗಾವಣೆ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವರಲಕ್ಷ್ಮಿ ಅವರು ಜನವಾದಿ ಮಹಿಳಾ ಸಂಘಟನೆ ಪದಾಧಿಕಾರಿಗಳ ಜೊತೆಗೂಡಿ ಫೆ.28ರಿಂದ ಪಂಚಾಯಿತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು.
 
ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಪರಿಶೋಧಕ ಶ್ರೀನಿವಾಸಮೂರ್ತಿ ಹಾಗೂ ತಾಲ್ಲೂಕು ಪಂಚಾಯಿತಿ ಇಒ ಲೋಕೇಶ್ ಧರಣಿ ಸ್ಥಳಕ್ಕೆ ಭೇಟಿ ನೀಡಿದರು. 15 ದಿನಗಳಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ಧರಣಿ ವಾಪಸ್ ಪಡೆಯಲಾಯಿತು.
 
ಶ್ರೀನಿವಾಸಮೂರ್ತಿ ಮಾತನಾಡಿ, ಧರಣಿನಿರತರ ಬೇಡಿಕೆಗಳ ಈಡೇರಿಕೆಗಾಗಿ ಈಗಾಗಲೇ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರೊಂದಿಗೆ ಚರ್ಚಿಸಲಾಗಿದೆ. ಪಿಡಿಒ ಬದಲಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇತರೆ ಬೇಡಿಕೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗು ವುದು ಎಂದು ಅವರು 
ತಿಳಿಸಿದರು.

ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಅನುಪಮ ನಾಗವಾರ, ಕಾರ್ಯದರ್ಶಿ ಚಿಕ್ಕೇನಹಳ್ಳಿ ಪ್ರಮೀಳಾ, ಸದಸ್ಯರುಗಳಾದ ಬೋರಮ್ಮ, ರೇಣುಕಮ್ಮ, ಶಾಂತಮ್ಮ, ಜಯಮ್ಮ ಮತ್ತಿತರರು ಇದ್ದರು.
 
* ಅಧಿಕಾರಿಗಳ ಭರವಸೆ ಮೇರೆಗೆ ತಾತ್ಕಾಲಿಕವಾಗಿ ಧರಣಿ ವಾಪಸ್ ಪಡೆಯಲಾಗಿದೆ. ಭರವಸೆ ಈಡೇರದಿದ್ದರೆ ಮತ್ತೆ ಉಗ್ರ ಪ್ರತಿಭಟನೆ ನಡೆಸಲಾಗುವುದು
ವರಲಕ್ಷ್ಮಿ, ಉಪಾಧ್ಯಕ್ಷೆ, ಗ್ರಾಮ ಪಂಚಾಯಿತಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT