ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈದ್ಯರ ಸೋಗಿನಲ್ಲಿ ದಾಳಿ: 30 ಸಾವು

ಸೇನಾ ಆಸ್ಪತ್ರೆಯಲ್ಲಿ ಐಎಸ್‌ ಉಗ್ರರ ಕೃತ್ಯ
Last Updated 8 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಕಾಬೂಲ್‌ : ಆಫ್ಘಾನಿಸ್ತಾನದ ಅತಿ ದೊಡ್ಡ ಸೇನಾ ಆಸ್ಪತ್ರೆಗೆ ಬುಧವಾರ ವೈದ್ಯರ ಸೋಗಿನಲ್ಲಿ ನುಗ್ಗಿದ ಐಎಸ್‌ ಉಗ್ರರು ನಡೆಸಿದ ದಾಳಿಗೆ ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಸುಮಾರು 70 ಜನ  ಗಾಯಗೊಂಡಿದ್ದಾರೆ.

ಇಲ್ಲಿನ ಸರ್ದಾರ್‌ ಮೊಹಮ್ಮದ್‌ ದೌದ್‌ ಖಾನ್‌ ಆಸ್ಪತ್ರೆಗೆ ವೈದ್ಯರಂತೆ ಬಿಳಿಕೋಟು ಧರಿಸಿ ಪ್ರವೇಶಿಸಿದ ದಾಳಿಕೋರರು ಅಲ್ಲಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದರು. ಸುಮಾರು ಆರು ಗಂಟೆ ಕಾರ್ಯಾಚರಣೆ ಬಳಿಕ ಭದ್ರತಾ ಸಿಬ್ಬಂದಿ ಉಗ್ರರನ್ನು ಸದೆಬಡಿಯುವಲ್ಲಿ ಸಫಲರಾದರು.
  
ಆಸ್ಪತ್ರೆಯೊಳಗಿದ್ದ ವೈದ್ಯಕೀಯ ಸಿಬ್ಬಂದಿ ಸಹಾಯಕ್ಕಾಗಿ ಫೇಸ್‌ಬುಕ್‌ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಮೊರೆಯಿಟ್ಟರು. ಆಸ್ಪತ್ರೆಯ ಹೊರಭಾಗದಲ್ಲಿ ಸರ್ಕಾರಿ ಸಂಸ್ಥೆಗಳು ಮತ್ತು ರಾಯಭಾರ ಕಚೇರಿಗಳಿರುವ ಸ್ಥಳದಲ್ಲಿ ಬೆಳಗ್ಗೆ 9 ಗಂಟೆಗೆ ಬಾಂಬ್ ಸ್ಫೋಟ ಸಂಭವಿಸಿದೆ. ಬಳಿಕ ಆಸ್ಪತ್ರೆಯ ಮುಖ್ಯ ದ್ವಾರದಲ್ಲಿ ಒಬ್ಬಾತ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ.

ನಂತರ ನಾಲ್ವರು ದಾಳಿಕೋರರು ಆಸ್ಪತ್ರೆಗೆ ನುಗ್ಗಿದರು. ಸೇನಾ ಹೆಲಿಕಾಪ್ಟರ್‌ಗಳು ಆಸ್ಪತ್ರೆ ಕಟ್ಟಡದ ಮೇಲ್ಭಾಗದಲ್ಲಿ ಹಾರಾಡುವಾಗ 10.45ರ ವೇಳೆಗೆ ಮತ್ತೊಂದು ಬಾಂಬ್ ಸ್ಫೋಟ ನಡೆದಿದೆ. ದಾಳಿಯಲ್ಲಿ ಕನಿಷ್ಠ ಐವರು ಆತ್ಮಾಹುತಿ ಬಾಂಬರ್‌ಗಳು ಭಾಗಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಐಎಸ್‌ ಹೊಣೆ : ದಾಳಿಯ ಹೊಣೆಯನ್ನು ಐಎಸ್‌ ಸಂಘಟನೆ ಹೊತ್ತುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT