ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾನುಪಾತ: ಕೊಡಗು ಪ್ರಥಮ

ಜಿಲ್ಲೆಯಲ್ಲಿ ಒಂದು ಸಾವಿರ ಪುರುಷರಿಗೆ 978 ಮಹಿಳೆಯರು; ರಾಷ್ಟ್ರದಲ್ಲಿ ಜಿಲ್ಲೆ ಮೊದಲ ಸ್ಥಾನ
Last Updated 9 ಮಾರ್ಚ್ 2017, 8:41 IST
ಅಕ್ಷರ ಗಾತ್ರ
ಮಡಿಕೇರಿ:  ರಾಷ್ಟ್ರದಲ್ಲಿ ಲಿಂಗಾನುಪಾತದಲ್ಲಿ ಕೊಡಗು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ ತಿಳಿಸಿದರು.
 
ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವತಿಯಿಂದ ಜಿಲ್ಲಾ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಾರ್ಡ್‌ನಲ್ಲಿ ಬುಧವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಏರ್ಪಡಿಸಲಾಗಿದ್ದ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 
 
ಜಿಲ್ಲೆಯಲ್ಲಿ ಸಾವಿರ ಪುರುಷರಿಗೆ  978 ಮಹಿಳೆಯರು ಇದ್ದಾರೆ. ಲಿಂಗಾನುಪಾತ ಬಹುತೇಕ ಸಮಾನವಾಗಿದೆ ಎಂದು ಮಾಹಿತಿ ನೀಡಿದರು.
 
ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಸಮಾಜದ ಶ್ರೇಯೋಭಿವೃದ್ಧಿಗೆ ಮಹಿಳೆಯರ ಪಾತ್ರ ಅಪಾರ ಎಂದು ಅವರು ಅಭಿಪ್ರಾಯ ಪಟ್ಟರು. ಇಂದಿರಾಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಕಲ್ಪನಾ ಚಾವ್ಲಾ, ಅಕ್ಕಮಹಾದೇವಿ ಸೇರಿದಂತೆ ಹಲವು ಮಹಿಳೆಯರು ಸಮಾಜಕ್ಕೆ ಹಲವು ಕೊಡುಗೆ ನೀಡಿದ್ದಾರೆ ಎಂದರು. 
 
ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಪಾತ್ರ ಮಹತ್ತರವಾಗಿದೆ. ಜತೆಗೆ, ಸಮಾಜದಲ್ಲಿ ಮಹಿಳೆಯರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂದು ಹೇಳಿದರು.  
 
ಜಿಲ್ಲಾ ಆಸ್ಪತ್ರೆಯ ಶ್ವಾಸಕೋಶದ ತಜ್ಞ ಡಾ.ಸದಾಶಿವಪ್ಪ ಮಾತನಾಡಿ, ಗಂಡು ಮತ್ತು ಹೆಣ್ಣು ಸಮಾನರು ಎಂಬ ಭಾವನೆ ಬರಬೇಕು; ಪುರುಷರು ಮತ್ತು ಮಹಿಳೆಯರನ್ನು ಸರಿಸಮಾನವಾಗಿ ಕಾಣಬೇಕು. ಪುರುಷ ಮತ್ತು ಮಹಿಳೆಯರು ಎಂಬ ತಾರತಮ್ಯ ಸಮಾಜದಲ್ಲಿ ಇರಬಾರದು ಎಂದು ತಿಳಿಸಿದರು. 
 
‘18 ವರ್ಷದೊಳಗೆ ಹುಡುಗಿಯರಿಗೆ ಮದುವೆ ಮಾಡಬಾರದು. ಶಿಕ್ಷಣ, ಆರೋಗ್ಯ  ಹಕ್ಕುಗಳನ್ನು ಕಡ್ಡಾಯವಾಗಿ ನೀಡಬೇಕು ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆಶಾ ಹೇಳಿದರು. 
 
ಸಂವಿಧಾನದ ಅಡಿಯಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆ ಮತ್ತು ಹಕ್ಕುಗಳನ್ನು ವಿವರಿಸಿದರು.  ವೈದ್ಯಕೀಯ ಕಾಲೇಜಿನ ಡಾ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ತಜ್ಞರಾದ ರಾಜೇಶ್ವರಿ, ಡಾ.ಹರ್ಷ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ ಇತರರು ಇದ್ದರು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT