ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಹಿಳೆಯ ಪಾಲ್ಗೊಳ್ಳುವಿಕೆ ಹೆಚ್ಚಲಿ’

ಸುವರ್ಣ ವಿಧಾನಸೌಧದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನ ಆಚರಣೆ, ಗಣ್ಯರಿಗೆ ಸನ್ಮಾನ
Last Updated 9 ಮಾರ್ಚ್ 2017, 11:23 IST
ಅಕ್ಷರ ಗಾತ್ರ
ಬೆಳಗಾವಿ: ‘ಪ್ರಸ್ತುತ ದಿನಗಳಲ್ಲಿ ಮಹಿಳೆ­ಯರು ಎಲ್ಲ ಕ್ಷೇತ್ರಗಳಲ್ಲೂ ಪ್ರವೇಶಿಸಿ­ದ್ದಾರೆ. ಮಹಿಳೆಯರು ಇಲ್ಲದ ಯಾವ ಕ್ಷೇತ್ರವೂ ಇಲ್ಲ. ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕಾಗಿದೆ’ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಆಶಾ ಐಹೊಳೆ ಹೇಳಿದರು.
 
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಮತ್ತು ಮಹಿಳೆ ಮತ್ತು ಮಕ್ಕಳ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ಇತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆದ ‘ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ರಾಜಕೀಯ, ಆಡಳಿತ, ಸಾಹಿತ್ಯ ಸೇರಿದಂತೆ  ವಿವಿಧ ಕ್ಷೇತ್ರಗಳಲ್ಲಿ ಮಹಿಳೆ­ಯರು ಪಾಲ್ಗೊಳ್ಳುತ್ತಿದ್ದಾರೆ. ಇವರು ಇನ್ನಷ್ಟು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮಹಿಳೆಯರಿಗೆ ಗೌರವ ಕೊಡುವ ನಿಮಿತ್ತ ಅಂತರಾಷ್ಟ್ರೀಯ ಮಟ್ಟದಲ್ಲಿ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
 
 ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸುವ ಅಗತ್ಯವಿದೆ. ಅದರಲ್ಲೂ ಗ್ರಾಮೀಣ ಭಾಗದ ಮಹಿಳೆಯರಿಗೆ ಮುಕ್ತ ಅವಕಾಶ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಎಲ್ಲ ಮಹಿಳೆಯರು ಚಿಂತನೆ ಮಾಡಬೇಕೆಂದು ಜಿಲ್ಲಾಧಿಕಾರಿ ಎನ್.ಜಯರಾಮ್‌ ಹೇಳಿದರು.
 
ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್ ಆರ್, ಮಾತನಾಡಿ, ಮಹಿಳೆಯರು ನೆಮ್ಮದಿಯಿಂದ ಜೀವ ನಡಸಲು ಸುರಕ್ಷಿತ­ವಾದ ವಾತಾವರಣ ನಿರ್ಮಾಣ­ವಾಗಬೇಕು ಎಂದು ಅವರು ಹೇಳಿದರು.
 
ಈ ಸಂದರ್ಭದಲ್ಲಿ ಕೆ.ಎಲ್.ಇ ಮಹಿಳಾ ಸಬಲೀಕರಣ ಕಾರ್ಯದರ್ಶಿ ಪ್ರೀತಿ ದೊಡವಾಡ, ಉದ್ಯಮಿ  ಆಶಾ ಕೋರೆ, ಕಲಾವಿದೆ ಶಾಂತಾ ಆಚಾರ್ಯ, ಪ್ರಭಾವತಿ, ಸರ್ವಮಂಗಳಾ ಅರಳಿಮಟ್ಟಿ, ಜಿಲ್ಲಾ ಕ.ಸಾಪಾ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಮತ್ತಿತರರು ಹಾಜರಿದ್ದರು. 
 
ಇದೇ ಸಂದರ್ಭದಲ್ಲಿ ಮಹಿಳಾ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟದಲ್ಲಿ ಸ್ಥಾನ ಪಡೆದಿರುವ ಐಶ್ವರ್ಯ ಪಾಟೀಲ, ದಿಯಾ ಶಿಂಧೆ, ಅಶ್ವಿನಿ ಸನದಿ, ಶ್ರೀದೇವಿ ಪಾಟೀಲ ಅವರನ್ನು ಜಿಲ್ಲಾಧಿಕಾರಿಗಳು ಹಾಗೂ ಅತಿಥಿಗಳು ಸನ್ಮಾನಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ವಿ. ವರವಟ್ಟಿ ಅವರು ಸ್ವಾಗತಿಸಿದರು. ಸುನೀತಾ ದೇಸಾಯಿ ಕಾರ್ಯಕ್ರಮ ನಿರೂಪಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT