ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದನ ಗದ್ದಲದ ವಿಡಿಯೊ ಒದಗಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್‌ ಹೈಕೋರ್ಟ್‌ ಸೂಚನೆ

Last Updated 10 ಮಾರ್ಚ್ 2017, 10:19 IST
ಅಕ್ಷರ ಗಾತ್ರ

ಚೆನ್ನೈ: ಫೆಬ್ರುವರಿ 18ರಂದು ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಗದ್ದಲದ ವಿಡಿಯೊ ದೃಶ್ಯಾವಳಿಯನ್ನು ನೀಡುವಂತೆ ಮದ್ರಾಸ್‌ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಸೂಚನೆ ನೀಡಿದೆ.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ವಿಶ್ವಾಸಮತ ಯಾಚಿಸಲು ಫೆಬ್ರುವರಿ 18ರಂದು ವಿಶೇಷ ಅಧಿವೇಶನ ಕರೆಯಲಾಗಿತ್ತು. ಗೋಪ್ಯ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಭಾರಿ ಗದ್ದಲ ಎಬ್ಬಿಸಿದ್ದರು. ಡಿಎಂಕೆ ಸದಸ್ಯರನ್ನು ಸದನದಿಂದ ಹೊರಹಾಕಿದ ನಂತರ ನಡೆದ ವಿಶ್ವಾಸಮತ ಯಾಚನೆಯಲ್ಲಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಬಹುಮತ ಸಾಬೀತುಪಡಿಸಿದ್ದರು.

‘ಗುಪ್ತ ಮತದಾನಕ್ಕೆ ಅವಕಾಶ ಕೊಡಬೇಕು’ ಎಂಬ ಬೇಡಿಕೆ ಮುಂದಿಟ್ಟಿದ್ದ ವಿರೋಧಪಕ್ಷ ಡಿಎಂಕೆ ಸದಸ್ಯರು ಸದನವನ್ನು ಕದನದ ಕಣವಾಗಿಸಿದ್ದರು. ಸದನದಲ್ಲಿ ನಡೆದ ಗಲಾಟೆಯ ವೇಳೆ ಸ್ಪೀಕರ್ ಪಿ. ಧನಪಾಲ್ ಅವರ ಅಂಗಿ ಹರಿದು, ಅವರತ್ತ ಚಪ್ಪಲಿ ಎಸೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT