ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಜೈಲಿನಿಂದ ವಿಚಾರಣಾಧೀನ ಕೈದಿ ಪರಾರಿ

Last Updated 10 ಮಾರ್ಚ್ 2017, 10:57 IST
ಅಕ್ಷರ ಗಾತ್ರ

ಮಂಗಳೂರು: ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬ ಜೈಲಿನಿಂದ ಪರಾರಿಯಾಗಿರುವ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ಬೋಳ್ಕಲ್‌ ಮನೆಯ ಜಿನ್ನಪ್ಪ ಪರವ (37) ಪರಾರಿಯಾಗಿರುವ ಕೈದಿ. ಪೋಕ್ಸೊ ಪ್ರಕರಣ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇಲೆ ಈತನನ್ನು ಬಂಧಿಸಿ, 2015ರಿಂದ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಶುಕ್ರವಾರ ನಸುಕಿನ ಜಾವ 3.30ರ ಸುಮಾರಿಗೆ ಜೈಲಿನ ಆವರಣ ಗೋಡೆ ಜಿಗಿದು ಪರಾರಿಯಾಗಿದ್ದು, ಬೆಳಿಗ್ಗೆ ವಿಷಯ ಕಾರಾಗೃಹದ ಅಧಿಕಾರಿಗಳ ಗಮನಕ್ಕ ಬಂದಿದೆ.

ನಗರದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಕೈದಿಯ ಪತ್ತೆಗೆ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT