ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಶವ್‌ ಮೌರ್ಯ ಅಥವಾ ರಾಜನಾಥ್ ಸಿಂಗ್ ಉತ್ತರ ಪ್ರದೇಶದ ಮುಂದಿನ ಸಿಎಂ?

Last Updated 11 ಮಾರ್ಚ್ 2017, 9:51 IST
ಅಕ್ಷರ ಗಾತ್ರ

ಲಖನೌ:  ಉತ್ತರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವಿನ ಹೊಸ್ತಿಲಲ್ಲಿ ಇರುವಾಗಲೇ  ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆಗಳು ಗರಿಗೆದರಿವೆ.

ಬಲ್ಲ ಮೂಲಗಳ ಪ್ರಕಾರ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಉಮಾಭಾರತಿ ಹಾಗೂ ಉತ್ತರಪ್ರದೇಶದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೇಶವ್‌ ಮೌರ್ಯ ಮುಖ್ಯಂತ್ರಿಗಳ ರೇಸ್‌ನಲ್ಲಿ ಇದ್ದಾರೆ.

2000ನೇ ವರ್ಷದಲ್ಲಿ  ರಾಜನಾಥ್ ಸಿಂಗ್ ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದರು.  ಹಿರಿಯ ರಾಜಕಾರಣಿಯಾಗಿರುವ ರಾಜನಾಥ್ ಸಿಂಗ್  ಉತ್ತರಪ್ರದೇಶ ಬಿಜೆಪಿಯಲ್ಲಿ ಉತ್ತಮ ಹಿಡಿತ ಸಾಧಿಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಚುನಾವಣೆಯಲ್ಲಿ ಬಿಜೆಪಿಯ ಉತ್ತಮ ಸಾಧನೆಗೆ ರಾಜ್ಯ ಘಟಕದ ಅಧ್ಯಕ್ಷ ಕೇಶವ್ ಮೌರ್ಯ ಅವರ ಕೊಡುಗೆಯು ಇರುವುದರಿಂದ  ಅಂತಿಮವಾಗಿ ಹೈಕಮಾಂಡ್ ಕೇಶವ್ ಮೌರ್ಯ ಅವರ ಹೆಸರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಣಿಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT