ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ ಬಿಜೆಪಿಗೆ ನಿಚ್ಚಳ ಬಹುಮತ

Last Updated 11 ಮಾರ್ಚ್ 2017, 13:58 IST
ಅಕ್ಷರ ಗಾತ್ರ

ಡೆಹರಾಡೂನ್‌: ಉತ್ತರಾಖಂಡದಲ್ಲಿ ಬಿಜೆಪಿ ಬಹುಮತ ಪಡೆದಿದೆ. ಸಂಜೆ 4.45ರ ವರೆಗೆ ಬಿಜೆಪಿ 50 ಸ್ಥಾನಗಳಲ್ಲಿ ವಿಜಯ ಸಾಧಿಸಿದ್ದು, 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಕಾಂಗ್ರೆಸ್‌ 11 ಸ್ಥಾನಗಳಲ್ಲಿ ಗೆಲುವು ಸಾಧಿಸಲಷ್ಟೇ ಸೀಮಿತವಾಗಿದೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 

ಕಾಂಗ್ರೆಸ್‌ ಹಿಂದಿಕ್ಕಿರುವ ಬಿಜೆಪಿ ಗೆಲುವಿನ ನಗೆ ಬೀರಿದ್ದು, ಸರ್ಕಾರ ರಚನೆಗೆ ಅಗತ್ಯ ಬಹುಮತ ಪಡೆದುಕೊಂಡಿದೆ.

ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಬಿಜೆಪಿ 50 ಸ್ಥಾನ ಗೆದ್ದುಕೊಂಡಿದೆ.

ಇದನ್ನೂ ಓದಿ...
ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಭೇರಿ
ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತ

ಪ್ರಧಾನಿ ಮೋದಿ, ಬಿಜೆಪಿಗೆ ರಾಹುಲ್‌ ಗಾಂಧಿ ಅಭಿನಂದನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT