ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಜೆಟ್: ಶಿಕ್ಷಣಕ್ಕೆ ಹೆಚ್ಚಿನ ಅನುದಾನ ನೀಡಿ’

ಉಚಿತ ಪ್ರವೇಶಕ್ಕೆ ಆಗ್ರಹ: ಭಾರತ ವಿದ್ಯಾರ್ಥಿ ಫೆಡರೇಷನ್ ಜಿಲ್ಲಾ ಘಟಕದಿಂದ ಪ್ರತಿಭಟನೆ
Last Updated 11 ಮಾರ್ಚ್ 2017, 11:23 IST
ಅಕ್ಷರ ಗಾತ್ರ
ಹಾವೇರಿ: ‘ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ 30ರಷ್ಟು ಹಣ ಮೀಸಲಿಡಬೇಕು. ಸತತ ಬರಗಾಲದ ಹಿನ್ನೆಲೆಯಲ್ಲಿ ಈಗಾಗಲೇ ವಿದ್ಯಾರ್ಥಿಗಳು ಭರಿಸಿದ ಎಲ್ಲ ಶುಲ್ಕವನ್ನು ವಾಪಸ್‌ ನೀಡಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಘಟಕದಿಂದ ಇಲ್ಲಿನ ಟಿಎಂಎಇಎಸ್ ಕಾಲೇಜು ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
 
ಎಸ್‌ಎಫ್‌ಐ ಕೇಂದ್ರ ಸಮಿತಿಯ ಸದಸ್ಯೆ ರೇಣುಕಾ ಕಹಾರ ಮಾತನಾಡಿ, ‘ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಆದ್ದರಿಂದ, ರಾಜ್ಯ ಬಜೆಟ್‌ನಲ್ಲಿ ಕೊಠಾರಿ ಆಯೋಗದ ಶಿಫಾರಸ್ಸಿನಂತೆ ಶೇ 30ರಷ್ಟು ಹಣವನ್ನು ಶಿಕ್ಷಣ ಕೇತ್ರಕ್ಕೆ ಮೀಸಲಿಡಬೇಕು’ ಎಂದರು.
 
‘ಶೇ 46 ರಷ್ಟು ಸರ್ಕಾರಿ ಶಾಲಾ- ಕಾಲೇಜುಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳಿಲ್ಲ. ಶೇ ೬೮ರಷ್ಟು ಪ್ರೌಢ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳಿಲ್ಲ. 2 ಲಕ್ಷ ಸರ್ಕಾರಿ ಶಾಲಾ ಕೊಠಡಿಗಳಲ್ಲಿ ಸುಮಾರು 34,591  ಕೊಠಡಿಗಳಿಗೆ ದುರಸ್ತಿಯ ಅಗತ್ಯವಿದೆ’ ಎಂದರು. 
 
‘ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ (ಆರ್.ಟಿ.ಇ) ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಜಿಲ್ಲೆಯಲ್ಲಿ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ’ ಎಂದರು. ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಎಂ ಮಾತನಾಡಿ, ‘ರಾಜ್ಯದ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಈ ತನಕ ಕೇವಲ ಶೇ 12 ರಷ್ಟು ಹಣ ಮಾತ್ರ ಮೀಸಲಿಡುತ್ತಿದ್ದಾರೆ. ಅದನ್ನು ಶೇ೩೦ಕ್ಕೆ ಏರಿಸಬೇಕು’ ಎಂದು ಒತ್ತಾಯಿಸಿದರು. 
 
‘ಇಲ್ಲಿನ ಕೆರಿಮತ್ತಿಹಳ್ಳಿಯ ರಾಜೀವ್‌ ಗಾಂಧಿ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಹಾಗೂ ಜಾನಪದ ವಿಶ್ವವಿದ್ಯಾಲಯಕ್ಕೆ ಅಗತ್ಯ ಬೋಧಕ ಬೋಧಕೇತರ ಸಿಬ್ಬಂದಿ ನೇಮಕ ಮಾಡಬೇಕು. ನ್ಯಾಯಮೂರ್ತಿ ಲಿಂಗ್ಡೊ ಸಮಿತಿಯ ಶಿಫಾರಸ್ಸಿನಂತೆ ವಿಶ್ವ ವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಬೇಕು’ ಎಂದರು. .
 
‘ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕ, -ಉಪನ್ಯಾಸಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು. ಆರ್.ಟಿ.ಇ ಕಾಯ್ದೆಯನ್ನು ಸಮರ್ಪಕ ವಾಗಿ ಜಾರಿಗೊಳಿಸಿ, ಗ್ರಾಮೀಣ ವಿದ್ಯಾರ್ಥಿಗಳಿಗೆ ನಗರ ಪ್ರದೇಶದ ಶಿಕ್ಷಣ ಸಂಸ್ಥೆಗಳಿಗಲ್ಲಿ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು. ರಾಜ್ಯದಲ್ಲಿ ಹೆಚ್ಚುತ್ತಿರುವ ಖಾಸಗಿ ಮನೆಪಾಠ (ಟ್ಯೂಶನ್) ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು’ ಎಂದರು.
 
ತಾಲ್ಲೂಕು ಘಟಕದ ಅಧ್ಯಕ್ಷ ಬಸನಗೌಡ ಭರಮಗೌಡ್ರ, ನೀಲಮ್ಮ ಬಿ.ಎಸ್, ವಿಠಲ ಗೌಳಿ, ಚೈತ್ರಾ. ಎಂ.ಎಚ್, ದೀಪಾ ಮಠದ, ಅನ್ನಪೂರ್ಣ, ದಾನೇ ಶ್ವರಿ, ಜ್ಯೋತಿ ಲಮಾಣಿ, ರೇಖಾ ಸುಧಾ, ಸಂತೋಷ ಬಿ, ಲಿಂಗರಾಜ ಡಿ.ಆರ್, ಮಂಜಪ್ಪ ಎಂ.ಎಂ, ಗಿರೀಶ್‌ ಸಿ.ಡಿ, ದೇವರಾಜ ಸಿ.ಬಿ, ಹರೀಶ ಸಿ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT