ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಯೋಜನೆಯೂ ಜಾರಿ ಇಲ್ಲ

Last Updated 14 ಮಾರ್ಚ್ 2017, 5:11 IST
ಅಕ್ಷರ ಗಾತ್ರ

ಪಾವಗಡ: ರೈತರು, ಬಡ ಜನರಿಗಾಗಿ ಕೇಂದ್ರ ಸರ್ಕಾರ ಯಾವೊಂದು ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಸಂಸದ ಬಿ.ಎನ್. ಚಂದ್ರಪ್ಪ ಆರೋಪಿಸಿದರು.
ಪಟ್ಟಣದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಜನ ವೇದನಾ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದರು.

ಪ್ರಧಾನಿ ಮೋದಿ ಅವರು ಸ್ವಚ್ಛ ಭಾರತ, ಯೋಗ ಕಾರ್ಯಕ್ರಮಗಳ ಪ್ರಚಾರಕ್ಕೆ ಕೋಟಿಗಟ್ಟಲೆ ಹಣ ವ್ಯಯಿಸುತ್ತಿದ್ದಾರೆ. ಪ್ರಪಂಚ ಪರ್ಯಟನೆ ನಡೆಸಲು ದೇಶದ ಸಾಮಾನ್ಯ ಜನರ ಹಣ ಪೋಲು ಮಾಡುತ್ತಿದ್ದಾರೆ. ಆದರೆ ಸಾಮಾನ್ಯ ಜನರಿಗಾಗಿ, ರೈತ, ಬಡ ಕಾರ್ಮಿಕ ವರ್ಗದವರಿಗೆ ಈವರೆಗೆ ಯಾವುದೇ ಪ್ರಮುಖ ಯೋಜನೆಯನ್ನು ಅನುಷ್ಠಾನಗೊಳಿಸಿಲ್ಲ. ₹ 6 ಲಕ್ಷ ಕೋಟಿ ಹಣವನ್ನು ಕಾರ್ಪೋರೇಟ್ ವಲಯಕ್ಕೆ ವಿನಾಯಿತಿ ನೀಡಲಾಗಿದೆ. ಬಡವರಿಗಾಗಲಿ, ಆತ್ಮಹತ್ಯೆಗೆ ಶರಣಾಗುತ್ತಿರುವ ರೈತರಿಗಾಗಲಿ ಏನೂ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಮಾಜಿ ಸಚಿವ ವೆಂಕಟರವಣಪ್ಪ ಮಾತನಾಡಿ, ಯಡಿಯೂರಪ್ಪ ಅವರು ಪದೇ ಪದೇ ಮುಖ್ಯಮಂತ್ರಿ ಮೇಲೆ ಅನಗತ್ಯವಾಗಿ ಟೀಕಾ ಪ್ರಹಾರ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಸ್ವತಃ ಮುಖ್ಯಮಂತ್ರಿ, ಮಂತ್ರಿಗಳು ಜೈಲಿಗೆ ಹೋಗಿದ್ದರು. ಆದರೆ ಸಿದ್ದರಾಮಯ್ಯ ಸರ್ಕಾರದಲ್ಲಿ ಯಾವುದೇ ಅವ್ಯವಹಾರ, ಭ್ರಷ್ಟಾಚಾರ ಪ್ರಕರಣ ನಡೆದಿಲ್ಲ. ನೂರಾರು ಪ್ರಕರಣಗಳಲ್ಲಿ ಸಿಲುಕಿಕೊಂಡಿರುವ ಯಡಿಯೂರಪ್ಪ ಅವರಿಗೆ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಮಾತನಾಡುವ ಅರ್ಹತೆ ಇಲ್ಲ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಸದೃಢವಾಗಿದೆ. ರಾಜ್ಯ ಸರ್ಕಾರದ ಜನಪರ ಯೋಜನೆಗಳು ಬಡ ಜನರಿಗೆ ಅನುಕೂಲಕರವಾಗಿವೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.

ಜಿ.ಪಂ ಸದಸ್ಯ ಎಚ್.ವಿ.ವೆಂಕಟೇಶ್, ಕೆಪಿಸಿಸಿ ಸದಸ್ಯ ಕೋಟೆ ಪ್ರಭಾಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ನರಸಿಂಹಯ್ಯ, ಜಿ.ಪಂ ಸದಸ್ಯ ಚನ್ನಮಲ್ಲಯ್ಯ, ಪಾಪಣ್ಣ, ತಾ.ಪಂ ಅಧ್ಯಕ್ಷ ಗೋವಿಂದಪ್ಪ, ಎಪಿಎಂಸಿ ಅಧ್ಯಕ್ಷ ಮಂಜಣ್ಣ, ಉಪಾಧ್ಯಕ್ಷ ಮಾರಣ್ಣ, ಸದಸ್ಯ ಕೆ.ಎಸ್.ಶ್ರೀನಿವಾಸ್, ರವಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಶೇಷಗಿರಿ, ಪರಿಶಿಷ್ಟ ಜಾತಿ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜು, ನಗರ ಘಟಕದ ಅಧ್ಯಕ್ಷ ಸುದೇಶ್ ಬಾಬು, ಪುರಸಭೆ ಸದಸ್ಯ ಎಂ.ಎಸ್.ವಿಶ್ವನಾಥ್, ಮಣಿ, ರಾಜೇಶ್, ರಿಜ್ವಾನ್  ಉಪಸ್ಥಿತರಿದ್ದರು.

**

ತಾಲ್ಲೂಕಿಗೆ ತುಂಗಭದ್ರಾ ನೀರು
ತುಂಗಭದ್ರಾ ನದಿ ನೀರನ್ನು ತಾಲ್ಲೂಕಿಗೆ ತರುವ ಯೋಜನೆ ಶೀರ್ಘವಾಗಿ ಆರಂಭವಾಗಲಿದೆ. ₹ 1,650 ಕೋಟಿ ವೆಚ್ಚದ ಯೋಜನೆಗೆ ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ₹ 600 ಕೋಟಿ ಅನುದಾನ ಮೀಸಲಿಟ್ಟಿದೆ. ಯೋಜನೆಯ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಯತ್ನಿಸಲಾಗುವುದು ಎಂದು ಲೋಕ ಸಭೆ ಸದಸ್ಯ ಬಿ.ಎನ್.ಚಂದ್ರಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT