ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೋಲ್ ವ್ಯವಸ್ಥಾಪಕನ ಮೇಲೆ ಶಾಸಕ ಸುರೇಶಗೌಡ ಹಲ್ಲೆ

Last Updated 14 ಮಾರ್ಚ್ 2017, 19:53 IST
ಅಕ್ಷರ ಗಾತ್ರ

ತುಮಕೂರು: ಕ್ಯಾತ್ಸಂದ್ರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಾಸ್ ಟೋಲ್‌ ವ್ಯವಸ್ಥಾಪಕ ಮಲ್ಲಿಕಾರ್ಜುನ್ ಅವರ ಮೇಲೆ ತುಮಕೂರು ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸುರೇಶಗೌಡ ಕಳೆದ ಶುಕ್ರವಾರ ಹಲ್ಲೆ ಮಾಡಿದ್ದಾರೆ.

‘ಏಕಾಏಕಿ ತಮ್ಮ ಕಚೇರಿಗೆ ನುಗ್ಗಿದ ಶಾಸಕರು ಫಾಸ್ಟ್ ಟ್ರ್ಯಾಕ್‌ ಮಾರ್ಗದಲ್ಲಿ ಹೋಗಲು ಸಿಬ್ಬಂದಿ ಬಿಡಲಿಲ್ಲ ಎಂದು  ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ’ ಎಂದು ಕ್ಯಾತ್ಸಂದ್ರ ಠಾಣೆಗೆ ಮಲ್ಲಿಕಾರ್ಜನ್ ಮಂಗಳವಾರ ದೂರು ನೀಡಿದ್ದಾರೆ.

ಎಸ್ಪಿ ಹೇಳಿಕೆ:  ‘ಶಾಸಕ ಬಿ.ಸುರೇಶಗೌಡ ಅವರು ಹಲ್ಲೆ ನಡೆಸಿರುವ ಬಗ್ಗೆ ಅಲ್ಲಿನ ವ್ಯವಸ್ಥಾಪಕ ಮಲ್ಲಿಕಾರ್ಜುನ್  ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂಥ್ ‘ಪ್ರಜಾವಾಣಿ’ಗೆ ತಿಳಿಸಿದರು.

‘ನಾನು ಮೂರ್ನಾಲ್ಕು ದಿನಗಳ ಹಿಂದೆ ಟೋಲ್ ಕಚೇರಿಗೆ ಹೋಗಿ ಪ್ರಶ್ನೆ ಮಾಡಿದ್ದೆ. ಆದರೆ ಯಾರ ಮೇಲೂ ಹಲ್ಲೆ ಮಾಡಿಲ್ಲ. ಈಗ ನನ್ನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.  ಗೃಹ ಸಚಿವ ರ ಆದೇಶದ ಮೇರೆಗೆ ಸಿಪಿಐ, ಪಿಎಸ್ಐ ಬೆದರಿಸಿ ದೂರು ಬರೆಸಿಕೊಂಡಿದ್ದಾರೆ’ ಎಂದು ಶಾಸಕ ಸುರೇಶ್‌ಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT