ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇವು– ಬೆಲ್ಲದ ಮಿಶ್ರಣ

Last Updated 16 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಒಂದನೇ ತರಗತಿಯಿಂದ ಪರಿಣಾಮಕಾರಿ ಇಂಗ್ಲಿಷ್‌ ಬೋಧನೆ, ಖಾಸಗಿ ವಲಯದಲ್ಲಿ ಶೇ 100ರಷ್ಟು ಕನ್ನಡಿಗರಿಗೆ ಉದ್ಯೋಗ, 5-10 ರೂಪಾಯಿಗೆ ತಿಂಡಿ, ಊಟದ ಸೌಲಭ್ಯವಿರುವ ‘ನಮ್ಮ ಕ್ಯಾಂಟೀನ್’, ಹೊಸ ಮೆಡಿಕಲ್ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ, ಕೂಲಿ ಕಾರ್ಮಿಕರಿಗೆ ಪಿಂಚಣಿ ಸೇರಿದಂತೆ ಬಡವರಿಗೆ ಅನುಕೂಲವಾಗುವಂತಹ ಹಲವು ಯೋಜನೆಗಳನ್ನು ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.

ಆದರೆ ಪ್ರಮುಖ ಆದ್ಯತಾ ವಲಯವಾದ ನಿರುದ್ಯೋಗಿಗಳಿಗೆ ಉದ್ಯೋಗ ಸೃಷ್ಟಿಸುವ ದೂರದೃಷ್ಟಿಯ ಯೋಜನೆ, ಕೃಷಿ ವಲಯ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾದ ನಿರ್ದಿಷ್ಟ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಇರುವುದು ಸ್ವಲ್ಪಮಟ್ಟಿಗೆ ನಿರಾಸೆ ಮೂಡಿಸಿದೆ. ಹೀಗಾಗಿ ಈ ಬಾರಿಯ ಬಜೆಟ್‌ ಬೇವು- ಬೆಲ್ಲದ ಮಿಶ್ರಣದಂತಿದೆ ಎನ್ನಬಹುದು.
-ಆರ್.ಕುಮಾರ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT