ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತರಿಂದ ನೋಟಿಸ್‌

ಮರಗಳ ರೆಂಬೆ ಕತ್ತರಿಸಿ, ಬುಡಕ್ಕೆ ಆ್ಯಸಿಡ್ ಸುರಿದ ಪ್ರಕರಣ
Last Updated 16 ಮಾರ್ಚ್ 2017, 20:10 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ಪೊಲೀಸ್‌ ಠಾಣೆ ಸಮೀಪ 10 ಮರಗಳ ರೆಂಬೆ ಕತ್ತರಿಸಿದ್ದ ಮತ್ತು ಮಾರತಹಳ್ಳಿ ಬಳಿ  17 ಮರಗಳ ಬುಡಕ್ಕೆ ಆ್ಯಸಿಡ್ ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಕೇಳಿ  ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ನೋಟಿಸ್‌ ಜಾರಿ ಮಾಡಿದ್ದಾರೆ.

ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತರು ಮತ್ತು ಪೊಲೀಸ್‌ ಆಯುಕ್ತರಿಗೆ ನೋಟಿಸ್‌ ನೀಡಿ ಏ.12ರೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ.

ಜಾಹೀರಾತು ಫಲಕಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ  10 ಮರಗಳ ರೆಂಬೆ ಕಡಿದಿರುವುದು ಮತ್ತು ಮಾರತಹಳ್ಳಿ ಬಳಿ 17 ಮರಗಳಿಗೆ ಆ್ಯಸಿಡ್‌ ಹಾಕಿ  ಒಣಗುವಂತೆ ಮಾಡಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ  ದೂರು ನೀಡಿದ್ದರು.

ದೂರಿನ ವಿಚಾರಣೆ ನಡೆಸಲು ಮುಂದಾಗಿರುವ ಲೋಕಾಯುಕ್ತ ನ್ಯಾಯಮೂರ್ತಿ , ಈ ಬಗ್ಗೆ  ‘ಪ್ರಜಾವಾಣಿ’ ವರದಿ ಪ್ರಕಟಿಸಿರುವುದನ್ನೂ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

ಮರದ ರೆಂಬೆ ಕಡಿಯಲು ಅವಕಾಶ ಕಲ್ಪಿಸಿದ ಆರೋಪಿಗಳ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳು ವರದಿ ನೀಡಬೇಕು. ಅಲ್ಲದೆ, ಏ. 22ರಂದು  ಖುದ್ದು ಹಾಜರಾಗಬೇಕು ಎಂದು ಲೋಕಾಯುಕ್ತರು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT