ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ತ್ರಿವೇಂದ್ರ ಸಿಂಗ್ ಆಯ್ಕೆ ಬಹುತೇಕ ಖಚಿತ

Last Updated 17 ಮಾರ್ಚ್ 2017, 6:01 IST
ಅಕ್ಷರ ಗಾತ್ರ

ನವದೆಹಲಿ: ಆರ್‍ಎಸ್ಎಸ್ ಮಾಜಿ ಪ್ರಚಾರಕ್  ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಉತ್ತರಾಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

ತ್ರಿವೇಂದ್ರ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ನಿನ್ನೆ ರಾತ್ರಿ ಅವರಿಗೆ ಮಾಹಿತಿ ನೀಡಿದ್ದು, ಶುಕ್ರವಾರ ಶಾಸಕಾಂಗ ಸಭೆಯಲ್ಲಿ  ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.

ಉತ್ತರಾಖಂಡದಲ್ಲಿ ಬಿಜೆಪಿ ಮೂರನೆಯ ಎರಡರಷ್ಟು ಸ್ಥಾನಗಳನ್ನು ಪಡೆದಿರುವುದು ಇದೇ ಮೊದಲು. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿಯ ತ್ರಿವೇಂದ್ರ ಸಿಂಗ್ ರಾವತ್, ಪ್ರಕಾಶ್ ಪಂತ್ ಮತ್ತು ಕಾಂಗ್ರೆಸ್ಸಿನಿಂದ ಬಿಜೆಪಿಗೆ ಬಂದಿರುವ ಸತ್ಪಾಲ್ ಮಹಾರಾಜ್ ಅವರ ಹೆಸರು ಕೇಳಿ ಬಂದಿತ್ತು.

ಇಂದು ನಡೆಯಲಿರುವ ಸಭೆಯಲ್ಲಿ ಕೇಂದ್ರ ಸಚಿವ  ನರೇಂದ್ರ ಸಿಂಗ್ ತೋಮರ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ,ಸರೋಜ್ ಪಾಂಡೆ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಉತ್ತರಾಖಂಡ್ ರಾಜ್ಯದ ಉಸ್ತುವಾರಿ ವಹಿಸಿರುವ  ಶ್ಯಾಮ್ ಜಾಜು ಭಾಗವಹಿಸಲಿದ್ದಾರೆ.

ಮಾರ್ಚ್ 18 ರಂದು ಡೆಹ್ರಾಡೂನ್‍ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ನೂತನ ಮುಖ್ಯಮಂತ್ರಿ ಅವರು ಮಾರ್ಚ್ 18ರಂದು 3 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ  ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉತ್ತರಾಖಂಡ್  ಬಿಜೆಪಿ ಅಧ್ಯಕ್ಷ  ಅಜಯ್ ಭಟ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT