ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಪೃಶ್ಯತೆ ಜೀವಂತವಾಗಿದೆ

Last Updated 17 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಕೆಳವರ್ಗದ ಜನರ ಜೀವನಮಟ್ಟ  ಸ್ವಲ್ಪ ಸುಧಾರಿಸಿದೆ ಎಂದರೆ ಅದಕ್ಕೆ ಅಂಬೇಡ್ಕರ್, ಮಹಾತ್ಮ ಗಾಂಧಿ ಅವರಂತಹ ನಾಯಕರ ಹೋರಾಟವೇ ಕಾರಣ. ಅವರ ಚಿಂತನೆಗಳು ಹಾಗೂ ಆದರ್ಶಗಳ ಸ್ಮರಣೆ ನಿರಂತರವಾಗಿರಬೇಕು. ಆದರೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿಯೊಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ನೋವಿನ ಸಂಗತಿ.

ದಲಿತ ವರ್ಗದ ಬಗೆಗಿನ ತಾರತಮ್ಯದಿಂದ ನೊಂದು ಅವರು ಇಂತಹ ಕೃತ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ. ಇದು, ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದಕ್ಕೆ ಸಾಕ್ಷಿ. ಈ ಯುವಕನ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಇಂಥ ದುರಂತಗಳು ಮರುಕಳಿಸದಂತೆ ನೋಡಿಕೊಳ್ಳಬೇಕು.
-ಯಶ್ವಂತ್ ಆರ್., ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT