ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಲಕ್ಷದ ಮರಳು, 12 ದೋಣಿ ವಶ

Last Updated 18 ಮಾರ್ಚ್ 2017, 7:52 IST
ಅಕ್ಷರ ಗಾತ್ರ

ಬಂಟ್ವಾಳ: ತಾಲ್ಲೂಕಿನ ಬರಿಮಾರು ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಇನ್‌ ಸ್ಪೆಕ್ಟರ್‌ ಬಿ.ಕೆ.ಮಂಜಯ್ಯ ನೇತೃತ್ವದ ಪೊಲೀಸರು ಶುಕ್ರವಾರ ದಾಳಿ ನಡೆಸಿ ಸುಮಾರು ₹ 10 ಲಕ್ಷ ಮೌಲ್ಯದ 20 ಲೋಡ್ ಮರಳು ಮತ್ತು 12 ದೋಣಿ ಮತ್ತಿತರ ಸಾಮಗ್ರಿ ವಶಪಡಿಸಿಕೊಂಡ ಘಟನೆ ನಡೆದಿದೆ.

ಇಲ್ಲಿನ ನೇತ್ರಾವತಿ ನದಿಯಲ್ಲಿ ಕಳೆದ ಹಲವು ಸಮಯದಿಂದ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಭೂಷಣ್ ಜಿ.ಬೊರಸೆ ಸೂಚನೆಯಂತೆ ಹೆಚ್ಚುವರಿ ಎಸ್ಪಿ ವೇದಮೂರ್ತಿ ಮತ್ತು ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ಮಾರ್ಗದ ರ್ಶನದಲ್ಲಿ ಇನ್‌ಸ್ಪೆಕ್ಟರ್‌ ಬಿ.ಕೆ.ಮಂಜಯ್ಯ ನೇತೃತ್ವದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಶುಕ್ರವಾರ ದಾಳಿ ನಡೆಸಿದರು. 

ಈ ಸಂದರ್ಭದಲ್ಲಿ ಅಕ್ರಮ ವಾಗಿ ಸಂಗ್ರಹಿಸಿಟ್ಟಿದ್ದ 20 ಲೋಡ್ ಮರಳು ಮತ್ತು ನೇತ್ರಾವತಿ ನದಿಯಿಂದ ಮರಳು ಹೊರ ತೆಗೆಯಲು ಬಳಸುತ್ತಿ ದ್ದರು ಎನ್ನ ಲಾದ 12 ದೋಣಿ ಮತ್ತಿತರ ಸಾಮಗ್ರಿಗ ಳನ್ನು ವಶಪಡಿಸಿಕೊಂಡಿರು ವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT