ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖ್ಯಾತ ಸಿನಿಮಾ ನಿರ್ಮಾಪಕ ಚಂದ್ರಹಾಸನ್ ನಿಧನ

Last Updated 19 ಮಾರ್ಚ್ 2017, 5:18 IST
ಅಕ್ಷರ ಗಾತ್ರ

ನವದೆಹಲಿ: ಬಹುಭಾಷಾ ನಟ ಕಮಲ್ ಹಾಸನ್ ಅವರ ಸಹೋದರ, ಖ್ಯಾತ ಸಿನಿಮಾ ನಿರ್ಮಾಪಕ ಚಂದ್ರಹಾಸನ್ (82) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಗಳು ಸಿನಿಮಾ ನಟಿ ಅನು ಹಾಸನ್ ಅವರ ಲಂಡನ್‍ನಲ್ಲಿರುವ ನಿವಾಸದಲ್ಲಿ ಇವರು ಕೊನೆಯುಸಿರೆಳೆದಿದ್ದಾರೆ.

ಕೆಲವು ತಿಂಗಳುಗಳ ಹಿಂದೆಯಷ್ಟೇ ಚಂದ್ರಹಾಸನ್ ಅವರ ಪತ್ನಿ ಗೀತಾಮಣಿ ಮರಣಹೊಂದಿದ್ದರು.

ರಾಜ್‍ಕಮಲ್ ಫಿಲಂಸ್‍ನ ಉಸ್ತುವಾರಿ ವಹಿಸಿದ್ದ ಇವರು ಕಮಲ್ ಹಾಸನ್ ಅವರ ಹಲವಾರು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. 

ಕಮಲ್ ಹಾಸನ್ ಅವರ ವಿಶ್ವರೂಪಂ ಮತ್ತು ತೂಂಗಾವನಂ ಸಿನಿಮಾದ ನಿರ್ಮಾಣದಲ್ಲಿಯೂ ಇವರು ಕಾರ್ಯವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT