ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಗುಂಡಿಕ್ಕಿ ಬಿಎಸ್‌ಪಿ ಮುಖಂಡನ ಹತ್ಯೆ

Last Updated 20 ಮಾರ್ಚ್ 2017, 5:02 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ಬಿಎಸ್‌ಪಿಯ ಸ್ಥಳೀಯ ಮುಖಂಡ ಮೊಹಮ್ಮದ್ ಶಮಿ ಅವರನ್ನು ದುಷ್ಕರ್ಮಿಗಳು ಭಾನುವಾರ ರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೊಹಮದ್‌ ಶಮಿ ಅವರು ತಮ್ಮ ಕಚೇರಿಯ ಹೊರಗೆ ನಿಲ್ಲಿಸಿದ್ದ ಕಾರಿನತ್ತ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡು ತಗುಲುತ್ತಿದ್ದಂತೆ ಶಮಿ ಅವರು ನೆಲಕ್ಕುರುಳಿದ್ದಾರೆ ಎಂದು ವರದಿಯಾಗಿದೆ.

ಅಲಹಾಬಾದ್‌ನ ಮೌ ಐಮಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಗುಂಡು ಹಾರಿಸಿದ ದುಷ್ಕರ್ಮಿಗಳ ಪರಾರಿಯಾಗಿದ್ದಾರೆ.

60 ವರ್ಷದ ಶಮಿ ಅವರು ಬಿಎಸ್‌ಪಿಯ ಸ್ಥಳೀಯ ಮುಖಂಡ. ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ಹಾಗೂ ಶಮಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಅದಿತ್ಯನಾಥ ಅವರು ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ಬಳಿಕ ಘಟನೆ ನೆಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT