ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮರ್ಪಕ ನೀರು ಸರಬರಾಜಿಗೆ ಸೂಚನೆ

Last Updated 20 ಮಾರ್ಚ್ 2017, 5:08 IST
ಅಕ್ಷರ ಗಾತ್ರ

ಬಾಗೇಪಲ್ಲಿ: ತಾಲ್ಲೂಕಿನ ಸುಮಾರು 20 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅಭಾವವಿರುವ ಕಡೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನ ಪರಗೋಡು, ಪೂಲವಾರಪಲ್ಲಿ, ರಾಮಸ್ವಾಮಿಪಲ್ಲಿ, ಏಟಗಡ್ಡಪಲ್ಲಿ, ಗೌನಿಪಲ್ಲಿ, ಯಗವಬಂಡ್ಲಕೆರೆ, ಮಲ್ಲಸಂದ್ರ, ದಾಸಯ್ಯಗಾರಿಪಲ್ಲಿ, ಗಿರಿಯಪ್ಪಹಳ್ಳಿ, ಊಟಗುಂದಿತಾಂಡ, ದೇಶಮಾರತಾಂಡ, ಸಿಂಗನಕುದುರೆ, ನರಾವುಲಪಲ್ಲಿ, ಕಲ್ಲೂರೋನಕುಂಟೆ, ಸಜ್ಜಪಲ್ಲಿ, ವೀರಾಪುರ, ಗುಂಡ್ಲಪಲ್ಲಿ, ಚೆಂಚುರಾಯನಪಲ್ಲಿ, ತಿಮ್ಮಂಪಲ್ಲಿ, ಗೂಳೂರು ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಶಾಸಕರು ಮಾಹಿತಿ ಪಡೆದರು.

ಕೂಡಲೇ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಕುಡಿಯುವ ನೀರಿನ ಸರಬರಾಜು ಇಲಾಖೆ, ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಬೆಸ್ಕಾಂ ಇಲಾಖೆಗಳು ಹಾಗೂ ಸಿಬ್ಬಂದಿ ಪ್ರತಿ ವಾರಕ್ಕೊಮ್ಮೆ ಭೇಟಿ ನೀಡಿ, ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಬೇಕು. ಬೇಸಿಗೆ ಕಾಲದಲ್ಲಿ ಯಾವ ಗ್ರಾಮದಲ್ಲಿಯೂ ಕುಡಿಯುವ ನೀರಿನ ಅಭಾವ ಆಗಬಾರದು. ಅಧಿಕಾರಿಗಳು ಗ್ರಾಮಗಳಲ್ಲಿದ್ದು, ನೀರು ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈಶ್ವರಪ್ಪ ಮಾತನಾಡಿ, 14ನೇ ಹಣಕಾಸಿನ ಯೋಜನೆಯಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೂ ₹ 6 ರಿಂದ 10 ಲಕ್ಷ ಹಣ ಸರ್ಕಾರದಿಂದ ಬಿಡುಗಡೆಯಾಗಿದೆ. ಕೇವಲ ಈ ಹಣ ಕುಡಿಯುವ ನೀರು ಸರಬರಾಜಿಗೆ ಮಾತ್ರ ಬಳಸಿಕೊಳ್ಳಬೇಕಾಗಿದೆ ಎಂದು ಸಭೆಗೆ ಮಾಹಿತಿ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈಶ್ವರಪ್ಪ, ಅಧ್ಯಕ್ಷ ನರೇಂದ್ರಬಾಬು, ಜಿಲ್ಲಾ ಪಂಚಾಯಿತಿ ಸದಸ್ಯ ಬೂರಗಮಡುಗು ನರಸಿಂಹಪ್ಪ, ಜಿಲ್ಲಾ ಪಂಚಾಯಿತಿ ಕುಡಿಯುವ ನೀರಿನ ಸರಬರಾಜು ಇಲಾಖೆ ಎಇಇ ರಾಮಲಿಂಗಾರೆಡ್ಡಿ, ಜಿಲ್ಲಾ ಪಂಚಾಯಿತಿ ತಾಂತ್ರಿಕ ಉಪ ವಿಭಾಗ ಎಇಇ ಶೇಷಾದ್ರಿ, ಬೆಸ್ಕಾಂ ಜೆಇ ಈಶ್ವರರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT