ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಣ ವಿಂಗಡಿಸಿದರೆ ಶಿಸ್ತು ಕ್ರಮ

ಜೆಡಿಎಸ್ ಯುವ ಸೈನ್ಯ ಕಾರ್ಯಕರ್ತರ ಸಭೆಯಲ್ಲಿ ನಟರಾಜ್ ಹೇಳಿಕೆ
Last Updated 20 ಮಾರ್ಚ್ 2017, 5:12 IST
ಅಕ್ಷರ ಗಾತ್ರ

ಕೋಲಾರ: ‘ಪಕ್ಷದಲ್ಲಿ ಬಣಗಳನ್ನು ವಿಂಗಡಿಸಿ ಸಂಘಟನೆಗೆ ತೊಂದರೆ ಮಾಡುವ ವ್ಯಕ್ತಿಗಳ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗುವುದು’ ಎಂದು ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ನಟರಾಜ್ ತಿಳಿಸಿದರು.

ನಗರ ಹೊರವಲಯದ ಸೋಲಾರ್ ಸಿಟಿ ಬಡಾವಣೆಯಲ್ಲಿ ಜೆಡಿಎಸ್‌ ಯುವ ಸೈನ್ಯ ಘಟಕದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕೆಲ ವ್ಯಕ್ತಿಗಳು ಪ್ರಭಾವವನ್ನು ಬಳಸಿಕೊಂಡು ಬಣಗಳನ್ನು ಮಾಡುತ್ತಿದ್ದಾರೆ, ಅಂತಹ ವ್ಯಕ್ತಿಗಳ ಮಾತಿಗೆ ಯಾರು ಕಿವಿಗೊಡಬೇಡಿ ಮನವಿ ಮಾಡಿದರು.

ಬೆಂಗಳೂರಿನಲ್ಲಿ ಏ.23ರಂದು ನಡೆಯಲಿರುವ ಪಕ್ಷದ ಸಮಾವೇಶದಲ್ಲಿ ವರಿಷ್ಠರು ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಸಾಧ್ಯತೆ ಇವೆ. ಜಿಲ್ಲೆಯಿಂದ 10 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದರಿಂದಾಗಿ ಯುವ ಸೈನ್ಯ ಘಟಕದ ಪದಾಧಿಕಾರಿಗಳು ಪ್ರತಿ ಗ್ರಾಮಕ್ಕೂ ಪ್ರವಾಸ ಮಾಡಿ ಪಕ್ಷ ಸಂಘಟಿಸುವುದರ ಜತೆಗೆ ಮತದಾರರನ್ನು ಸಮಾವೇಶಕ್ಕೆ ಕರೆತರುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಪಕ್ಷದ ಕಾರ್ಯಕರ್ತರಲ್ಲಿರುವ ಭಿನ್ನಾಭಿಪ್ರಾಯಗಳಿಂದ ಸಂಘಟನೆಯ ಮೇಲೆ ಪರಿಣಾಮ ಬೀರುತ್ತಿದೆ. ತಮ್ಮಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷ ಬಲವರ್ಧನೆಗೆ ಒತ್ತು ನೀಡಬೇಕು. ಕ್ಷೇತ್ರದಲ್ಲಿ ಜೆಡಿಎಸ್ ಅಭಿಮಾನಿಗಳಿಗೆ ಮತ್ತು ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಅಭಿಮಾನಿಗಳಿಗೇನು ಕೊರತೆಯಿಲ್ಲ. ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಅಗತ್ಯ  ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಯುವ ಸೈನ್ಯ ಘಟಕದ ಪದಾಧಿಕಾರಿಗಳು ಏಕಾಏಕಿಯಾಗಿ ನಿರ್ಧಾರಗಳನ್ನು ಕೈಗೊಳ್ಳುವುದನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.
‘ವಿಧಾನ ಸಭೆ ಚುನಾವಣೆಗೆ ಕೇವಲ ಒಂದು ವರ್ಷ ಕಾಲಾವಕಾಶವಿದೆ. ಈಗಿನಿಂದಲೇ ಪಕ್ಷ ಸಂಘಟನೆ ಮಾಡಿದಾಗ ಮಾತ್ರ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲು ಸಾಧ್ಯ’ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಇ.ಗೋಪಾಲಪ್ಪ ತಿಳಿಸಿದರು.

ಸ್ವಯಂ ಹೇಳಿಕೆಗಳನ್ನು ನೀಡುತ್ತಿದ್ದ ವ್ಯಕ್ತಿಗಳಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ಕೋಲಾರರಿಂದ ಬೆಂಗಳೂರಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್‌ಗಾಗಿ ಬೇಡಿಕೆ ಇಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಈ ಬಗ್ಗೆ ವರಿಷ್ಠರು ಸಹ ಯೋಚಿಸಬೇಕಾಗುತ್ತದೆ.

ಹತ್ತಿರಕ್ಕೆ ಬರುವ ನಾಯಕರ ಬೆನ್ನು ತಟ್ಟಿ ಟಿಕೆಟ್ ನೀಡುವ ಭರವಸೆ ನೀಡಬಾರದು. ಇದರಿಂದ ಪಕ್ಷದ ಸಂಘಟನೆಯ ಮೇಲೆ ಪರಿಣಾಮ ಬೀರುತ್ತದೆ. ಪಕ್ಷದ ಜಿಲ್ಲಾ ಘಟಕದಿಂದ ಶಿಫಾರಸು ಮಾಡುವ ವ್ಯಕ್ತಿಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದರು.

ಕ್ಷೇತ್ರದ ಶಾಸಕ ವರ್ತೂರು ಪ್ರಕಾಶ್‌ ನಡೆಸುತ್ತಿರುವ ದುರಾಡಳಿತದ ಬಗ್ಗೆ ಮತದಾರರಲ್ಲಿ ಅವಿಶ್ವಾಸ ಮೂಡಿದೆ ಎಂದು ತಿಳಿಸಿದರು.
ಜೆಡಿಎಸ್ ಯುವ ಸೈನ್ಯ ಘಟಕದ ಪ್ರಚಾರ ಪತ್ರವನ್ನು ತಾಲ್ಲೂಕು ಘಟಕದ ಅಧ್ಯಕ್ಷ ಮೂರಂಡಹಳ್ಳಿ ಗೋಪಾಲಪ್ಪ ಬಿಡುಗಡೆಗೊಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ನಂಜುಡಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಮುರಳೀಧರ, ಎಪಿಎಂಸಿ ಅಧ್ಯಕ್ಷ ವೆಂಕಟೇಶ್‌, ಸಹಕಾರಿ ಯೂನಿಯನ್ ಒಕ್ಕೂಟದ ಮಾಜಿ ಅಧ್ಯಕ್ಷ ಸೊಣ್ಣೇಗೌಡ, ಮುಖಂಡ ಬಾಬುಮೌನಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT