ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್‌ ಬದುಕು ಆದರ್ಶನೀಯ

ಅಸ್ಪೃಶ್ಯತಾ ನಿವಾರಣಾ ವಿಚಾರಗೋಷ್ಠಿಯಲ್ಲಿ ಗಂಗಪ್ಪ ಅಭಿಮತ
Last Updated 20 ಮಾರ್ಚ್ 2017, 8:32 IST
ಅಕ್ಷರ ಗಾತ್ರ

ಕುಷ್ಟಗಿ: ಉತ್ತಮ ಆಡಳಿತ, ಭಾಷೆ, ಸಂಸ್ಕೃತಿ, ಸರ್ವಜನಾಂಗಗಳಿಗೆ ಸಮಾನ ಅವಕಾಶ ಕಲ್ಪಿಸುವ ವೈವಿಧ್ಯಮಯ ಸಂವಿಧಾನ ನೀಡಿದ ಡಾ.ಅಂಬೇಡ್ಕರ್‌ ಅವರ ಬದುಕಿನ ಅಧ್ಯಯನ ನಡೆಸಬೇಕು ಎಂದು ತಹಶೀಲ್ದಾರ್‌ ಎಂ.ಗಂಗಪ್ಪ ವಿದ್ಯಾರ್ಥಿಗಳಿಗೆ ಹೇಳಿದರು.

ಬುತ್ತಿಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಈಚೆಗೆ ಸಮಾಜ ಕಲ್ಯಾಣ ಇಲಾಖೆ, ದುರ್ಗಾಶಕ್ತಿ ಗ್ರಾಮೀಣ ಅಭಿವೃದ್ಧಿ ಮತ್ತು ಸಾಂಸ್ಕೃತಿಕ ಸೇವಾ ಸಂಸ್ಥೆ ಹಮ್ಮಿಕೊಂಡಿದ್ದ ಅಸ್ಪೃಶ್ಯತಾ ನಿವಾರಣೆ ಕುರಿತ ವಿಚಾರಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಅಸ್ಪೃಶ್ಯತೆ ಆಚರಣೆ ತಡೆಯುವ ಕಾನೂನು ಜಾರಿಗೊಳಿಸುವ ಮೂಲಕ  ಸರ್ಕಾರ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದು, ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ದೌರ್ಜನ್ಯ ತಡೆ ಸಮಿತಿ ಅಸ್ತಿತ್ವದಲ್ಲಿದ್ದು ತಾಲ್ಲೂಕಿನಲ್ಲಿ ಅಸ್ಪೃಶ್ಯತೆ, ಸಾಮಾಜಿಕ ದೌರ್ಜನ್ಯ ಪ್ರಕರಣಗಳು ನಡೆದಿಲ್ಲ. ಇಂಥ ಘಟನೆಗಳ ಕುರಿತು ಮೌಖಿಕ ಅಥವಾ ಲಿಖಿತವಾಗಿ ಗಮನಕ್ಕೆ ತಂದರೆ ಸೂಕ್ತ ಕ್ರಮ ಮತ್ತು ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಸರ್ಕಾರಿ ಪದವಿ ಕಾಲೇಜಿನ ಹಿರಿಯ ಪ್ರಾಧ್ಯಾಪಕ ಬಸವರಾಜ ಕಂಬಳಿ ಮಾತನಾಡಿ, ಅಸ್ಪೃಶ್ಯತೆ, ಅಸಮಾನತೆ, ಹಸಿವು, ಬಡತನ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಲಿಂಗ ತಾರತಮ್ಯ ಇವುಗಳೆಲ್ಲವೂ ನಿವಾರಣೆಯಾಗಿ ಆದರ್ಶ ಸಮಾಜ ನಿರ್ಮಾಣವಾಗಬೇಕಾದರೆ ಬುದ್ಧ, ಬಸವ, ಅಂಬೇಡ್ಕರ್‌ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು. ಆದರೆ ಇಂಥ ಸಮಸ್ಯೆಗಳು ಸ್ವಾಭಾವಿಕವಾಗಿ ನಿವಾರಣೆಯಾಗುವುದಿಲ್ಲ ಅಥವಾ ಅವುಗಳನ್ನು ಮುಚ್ಚಿಡಲೂ ಸಾಧ್ಯವಾಗುವುದಿಲ್ಲ ಎಂದರು.

ದಲಿತ ಮುಖಂಡ ಆನಂದ ಭಂಡಾರಿ ಮಾತನಾಡಿ, ಬಸವಣ್ಣ, ಅಂಬೇಡ್ಕರ್‌ ಅವರನ್ನು ಪೂಜಿಸಿದರೆ ಪ್ರಯೋಜನವಿಲ್ಲ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದರು. ಶರಣಪ್ಪ ಬೋದೂರು, ಬಸವರಾಜ ಉಪ್ಪಲದಿನ್ನಿ, ಸಮಾಜ ಕಲ್ಯಾಣ ಇಲಾಖೆ ಗ್ರೇಡ್ 2 ಸಹಾಯಕ ನಿರ್ದೇಶಕ ಎನ್.ಎಂ.ನಟರಾಜ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT