ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಗತ್‌ಸಿಂಗ್‌ ಪುಣ್ಯ ಸ್ಮರಣೆ ಕಾರ್ಯಕ್ರಮ: ರಕ್ಷಣೆ ಕೋರಿ ಲಾಹೋರ್‌ ಕೋರ್ಟ್‌ನಲ್ಲಿ ಅರ್ಜಿ

Last Updated 20 ಮಾರ್ಚ್ 2017, 12:52 IST
ಅಕ್ಷರ ಗಾತ್ರ

ಲಾಹೋರ್‌: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿಕಾರಿ ನಾಯಕ ಭಗತ್‌ ಸಿಂಗ್‌ ಅವರ ಪುಣ್ಯ ತಿಥಿ ಕಾರ್ಯಕ್ರಮಕ್ಕೆ ರಕ್ಷಣೆ ಕೋರಿ ಪಾಕಿಸ್ತಾನದ ಲಾಹೋರ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಭಗತ್ ಸಿಂಗ್‌ ಸ್ಮಾರಕ ಫೌಂಡೇಷನ್‌ ವತಿಯಿಂದ ಮಾರ್ಚ್‌ 23ರಂದು ಫವಾರ ಚೌಕ್‌ನಲ್ಲಿ ನಡೆಸಲು ಉದ್ದೇಶಿಸಲಾಗಿರುವ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಫೌಂಡೇಷನ್‌ ಅಧ್ಯಕ್ಷ ಅಡ್ವೊಕೇಟ್‌ ಇಮ್ತಿಯಾಜ್‌ ಖುರೇಷಿ ನ್ಯಾಯಾಲಯವನ್ನು ಕೋರಿದ್ದಾರೆ.

ಅರ್ಜಿಯಲ್ಲಿ, ‘ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸಾಧ್ಯತೆ ಇರುವುದರಿಂದ ಈ ಕುರಿತು ಸಂಬಂಧಿಸಿದ ಆಡಳಿತ ಹಾಗೂ ಅಧಿಕಾರಿ ವರ್ಗಕ್ಕೆ ಸೂಕ್ತ ಭದ್ರತೆ ಒದಗಿಸಲು ಆದೇಶಿಸಬೇಕು’ ಎಂದು ಉಲ್ಲೇಖಿಸಿದ್ದಾರೆ.

ಜತೆಗೆ ಪಂಜಾಬ್‌ ಮುಖ್ಯ ಕಾರ್ಯದರ್ಶಿ ಹಾಗೂ ಲಾಹೋರ್‌ ಪೋಲಿಸ್‌ ಮುಖ್ಯಸ್ಥರಿಗೂ ಸಾರ್ವಜನಿಕ ಕಾರ್ಯಕ್ರಮಕ್ಕೆ ರಕ್ಷಣೆ ಒದಗಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ನ್ಯಾಯಮೂರ್ತಿ ಅಬಿದ್‌ ಅಜೀಜ್‌ ಶೇಖ್‌ ವಿಚಾರಣೆಯನ್ನು ಸೋಮವಾರಕ್ಕೆ ಕಾಯ್ದಿರಿಸಿದ್ದಾರೆ.

ಬ್ರಿಟೀಷರು ಭಗತ್‌ ಸಿಂಗ್‌ ಅವರನ್ನು  1931ರ ಮಾರ್ಚ್ 23 ರಂದು ಗಲ್ಲಿಗೇರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT