ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು

Last Updated 20 ಮಾರ್ಚ್ 2017, 19:31 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ರಾತ್ರಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರು ಶೇಷಾದ್ರಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ಮುಂದುವರಿಸಿದ್ದಾರೆ. ಸಾವಿರಾರು ಮಂದಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತಾವು ತಂದಿದ್ದ ಕೈ ಚೀಲಗಳನ್ನೇ ದಿಂಬು ಮಾಡಿಕೊಂಡು, ಸೆರಗನ್ನು ಹೊದ್ದು ರಸ್ತೆಯ ಮಧ್ಯದಲ್ಲೇ ಮಲಗಿದ್ದಾರೆ.

‘ಸರ್ಕಾರ ತಮ್ಮ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಅಹೋರಾತ್ರಿ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮುಖ್ಯಮಂತ್ರಿಯವರು ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ’ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಸೋಮವಾರ ಇಡೀ ದಿನ ರಸ್ತೆಯಲ್ಲೇ ಪ್ರತಿಭಟನೆ ನಡೆಸಿದ್ದರಿಂದ ಬೆಂಗಳೂರಿನ ಹೃದಯಭಾಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT