ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿಗೊಂದು ಸ್ಮಶಾನ ಬೇಡ ಪರಿಷತ್ ಸದಸ್ಯರ ಒತ್ತಾಯ

Last Updated 21 ಮಾರ್ಚ್ 2017, 20:21 IST
ಅಕ್ಷರ ಗಾತ್ರ

ಬೆಂಗಳೂರು: ಜಾತಿಗೊಂದು ಸ್ಮಶಾನ ನಿರ್ಮಿಸದೆ ಒಂದೇ ಕಡೆ ಶವ ಸಂಸ್ಕಾರ ಮಾಡುವ ವ್ಯವಸ್ಥೆ ತರಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಎಲ್ಲ ಪಕ್ಷಗಳ ಸದಸ್ಯರು ಸರ್ಕಾರವನ್ನು ಒತ್ತಾಯಿಸಿದರು.

ವಿವಿಧ ಸಮುದಾಯಗಳಿಗೆ ರುದ್ರಭೂಮಿಗಾಗಿ ಸರ್ಕಾರಿ ಜಾಗ ಮಂಜೂರು ಮಾಡುವ ಕುರಿತು ಕಾಂಗ್ರೆಸ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ ಅವರ ಪ್ರಶ್ನೆಯ ಮೇಲೆ ಚರ್ಚೆ ನಡೆಯಿತು.

‘ಜಾತಿಗೆ ಒಂದು, ಉಪಜಾತಿಗೆ ಒಂದು ಸ್ಮಶಾನ ಮಾಡಬಾರದು. ಎಲ್ಲರಿಗೂ ಒಂದೇ ಸ್ಮಶಾನ ಇರಬೇಕು’ ಎಂದು ರಾಮಚಂದ್ರಗೌಡ ಹೇಳಿದರೆ, ‘ಜಾತಿ ಮೀರಿದಂತಹ ಸ್ಮಶಾನಗಳು ಇರಬೇಕು. ಈ ಬಗ್ಗೆ ಸರ್ಕಾರ ನೀತಿ ರೂಪಿಸಬೇಕು’ ಎಂದು ವಿ.ಎಸ್.ಉಗ್ರಪ್ಪ ಒತ್ತಾಯಿಸಿದರು. ಈ ಕುರಿತು ನಡೆದ ಚರ್ಚೆಯಲ್ಲಿ ಬಸವನಗೌಡ ಪಾಟೀಲ ಯತ್ನಾಳ, ಎಂ.ಕೆ. ಪ್ರಾಣೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT