ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೇಶನ ರಹಿತರ ಸಮಾವೇಶ

Last Updated 22 ಮಾರ್ಚ್ 2017, 6:59 IST
ಅಕ್ಷರ ಗಾತ್ರ

ಬೈಂದೂರು: ಬೈಂದೂರು ವಿಶೇಷ ತಹಶೀಲ್ದಾರ್ ಕಚೇರಿ ವ್ಯಾಪ್ತಿಯ ನಿವೇಶನ ರಹಿತರು ಗ್ರಾಮ ಪಂಚಾಯಿತಿಗಳ ವಸತಿ ಸಮಿತಿಗಳ ಮೂಲಕ ನಿವೇಶನ ಕೋರಿ ಅರ್ಜಿ ಸಲ್ಲಿಸಿ ವರ್ಷ ಉರುಳಿದೆ. ಆದರೆ, ತಹಶೀಲ್ದಾರ್ ಕಚೇರಿ ಆ ಯಾದಿಯನ್ನು ಈ ವರೆಗೆ ಅಂತಿಮಗೊಳಿಸಿಲ್ಲ.

ಈ ವಿಳಂಬ ನೀತಿ ಖಂಡನೀಯ ಎಂದು ಜಿಲ್ಲಾ ಕೃಷಿಕೂಲಿಕಾರರ ಸಂಘದ ಉಪಾಧ್ಯಕ್ಷ ರಾಜೀವ ಪಡುಕೋಣೆ ಹೇಳಿದರು. ಈಚೆಗೆ ಬೈಂದೂರು ಸಿಐಟಿಯು ಕಚೇರಿಯಲ್ಲಿ ನಡೆದ ವಲಯ ಮಟ್ಟದ ನಿವೇಶನ ರಹಿತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಸ್ತಾವಿಕ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಈ ಹಿಂದೆ ಅರ್ಜಿಗಳ ಕ್ಷಿಪ್ರ ವಿಲೇವಾರಿಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದ ಬಳಿಕ ಅರ್ಜಿಗಳನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸ ಲಾಗಿತ್ತು. ಅವು ಈವರೆಗೆ ಕ್ರಮ ವಹಿಸಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು ಎಂದರು.

ಮುಖಂಡರಾದ ಯು. ದಾಸ ಭಂಡಾರಿ, ನಾಗರತ್ನ ನಾಡ, ಗಣೇಶ ಮೊಗವೀರ ಬೈಂದೂರು, ಪದ್ಮಾವತಿ, ಶ್ಯಾಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT