ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

30ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ
Last Updated 22 ಮಾರ್ಚ್ 2017, 10:20 IST
ಅಕ್ಷರ ಗಾತ್ರ

ಮಡಿಕೇರಿ:  ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇದೇ 30ರಿಂದ ಆರಂಭಗೊಳ್ಳಲಿದ್ದು ಪರೀಕ್ಷೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಚಾರುಲತಾ ಸೋಮಲ್ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು. 

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಬಗ್ಗೆ ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.   

ಸರ್ಕಾರದ ನಿರ್ದೇಶನದಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು. ಯಾವುದೇ ನ್ಯೂನತೆಗಳು ಕಂಡು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷೆಗಳು ಸರಿಯಾದ ಸಮಯಕ್ಕೆ ಆರಂಭಗೊಳ್ಳಬೇಕು ಎಂದು ಸೂಚಿಸಿದರು.

ಪ್ರಶ್ನೆ ಪತ್ರಿಕೆಯನ್ನು ಖಜಾನೆಯಲ್ಲಿ ಭದ್ರವಾಗಿ ಇಡಬೇಕು. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿ.ವಿ. ಕ್ಯಾಮೆರಾ ಅಳವಡಿಸಬೇಕು ಎಂದು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಆರ್. ಬಸವರಾಜ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳು: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೇಂಟ್‌ ಮೈಕಲರ ಪ್ರೌಢಶಾಲೆ, ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು, ಮೂರ್ನಾಡು ಪ್ರೌಢಶಾಲೆ, ಸಿದ್ದಾಪುರ ಪ್ರೌಢಶಾಲೆ, ಸಂಪಾಜೆ ಪ್ರೌಢಶಾಲೆ, ಮಡಿಕೇರಿಯ ಸೇಂಟ್‌ ಜೋಸೆಫ್ ಪ್ರೌಢಶಾಲೆ,

ಸೋಮವಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಒಎಲ್‌ವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಶಾಲನಗರ ಫಾತಿಮಾ ಪ್ರೌಢಶಾಲೆ, ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಸೇಕ್ರೇಡ್ ಹಾರ್ಟ್ ಪ್ರೌಢಶಾಲೆ,

ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಂಟಿಕೊಪ್ಪ ಸೇಂಟ್‌ ಮೇರಿಸ್ ಪ್ರೌಢಶಾಲೆ, ಹೆಬ್ಬಾಲೆ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ನೆಲ್ಯಹುದಿಕೇರಿ ಸರ್ಕಾರಿ ಪ್ರೌಢಶಾಲೆ, ವಿರಾಜಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು,

ವಿರಾಜಪೇಟೆ ಸೇಂಟ್‌ ಅನ್ನಮ್ಮ ಪ್ರೌಢಶಾಲೆ, ಗೋಣಿಕೊಪ್ಪ ಸರ್ಕಾರಿ ಪ್ರೌಢಶಾಲೆ, ಗೋಣಿಕೊಪ್ಪಲು ಪ್ರೌಢಶಾಲೆ, ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆ, ತಿತಿಮತಿಯ ಸರ್ಕಾರಿ ಪ್ರೌಢಶಾಲೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT