ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುದೀಪ್‌ ಮತ್ತೆ ಬಾಲಿವುಡ್‌ಗೆ?

Last Updated 22 ಮಾರ್ಚ್ 2017, 19:30 IST
ಅಕ್ಷರ ಗಾತ್ರ

ಸುದೀಪ್‌ ಮತ್ತೆ ಬಾಲಿವುಡ್‌ಗೆ ಪಯಣ ಬೆಳೆಸಿದ್ದಾರೆ. ಸಲ್ಮಾನ್‌ ಖಾನ್‌ ಅವರ ‘ಟೈಗರ್‌ ಜಿಂದಾ ಹೈ’ ಚಿತ್ರದಲ್ಲಿ ಖಳ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಅವರದು ಐಎಸ್‌ಐ ಏಜೆಂಟ್‌ ಪಾತ್ರ...

ಹೀಗೊಂದು ಗುಸುಗುಸು ಬಾಲಿವುಡ್‌ ಗಲ್ಲಿಯಲ್ಲಿ ಹರಿದಾಡುತ್ತಿದೆ. ಕನ್ನಡ ಸಿನಿರಂಗದಲ್ಲಿ ಜನಪ್ರಿಯರಾಗಿರುವ ಸುದೀಪ್‌ ಬಾಲಿವುಡ್‌, ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿ ಈಗಾಗಲೇ ಹೆಸರು ಮಾಡಿದ್ದಾರೆ. ಹೀಗಾಗಿ ಸುದೀಪ್‌ ಆರು ವರ್ಷಗಳ ನಂತರ ಬಾಲಿವುಡ್‌ ಸಿನಿಮಾದಲ್ಲಿ ಅಭಿನಯಿಸುತ್ತಾರೆ ಎನ್ನುವ ಸುದ್ದಿ ಅಭಿಮಾನಿಗಳಲ್ಲಿ ಖುಷಿ ಹೆಚ್ಚಿಸಿದೆ.

ಕಬೀರ್‌ ಖಾನ್‌ ಅವರ ಹೊಸ ಸಿನಿಮಾದಲ್ಲಿ ಸುದೀಪ್‌ ಅಭಿನಯಿಸಲಿದ್ದಾರೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಹಿನ್ನೆಲೆಯಲ್ಲಿ ಈ ಗುಸುಗುಸು ಸಿನಿ ಲೋಕದಲ್ಲಿ ಬಿರುಸು ಪಡೆದುಕೊಂಡಿದೆ.

ಚಿತ್ರದಲ್ಲಿ ಕತ್ರಿನಾ ಕೈಫ್‌ ಕೂಡ ಅಭಿನಯಿಸಲಿದ್ದಾರೆ. ಆದರೆ ಸುದೀಪ್‌ ಈ ಚಿತ್ರದಲ್ಲಿ ಅಭಿನಯಿಸುತ್ತಾರೆಯೇ, ಇಲ್ಲವೇ ಎನ್ನುವುದು ಇನ್ನೂ ಖಚಿತವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT